ಬೆಂಗಳೂರು: 2025-26ನೇ ಸಾಲಿನ ಬಜೆಟ್‌ನಲ್ಲಿ (Karnataka Budget 2025) ವಾಹನಗಳ ತಯಾರಿಕೆ ಹಾಗೂ ಬಳಕೆಗೆ ಉತ್ತೇಜನ ನೀಡಲು ಬೆಂಗಳೂರು ವಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ EV ಕ್ಲಸ್ಟರ್‌ನ್ನು ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ EV ಕ್ಲಸ್ಟರ್ (EV Cluster) ನಿರ್ಮಾಣಕ್ಕೆ 25 ಕೋಟಿ ರೂ. ಅನುದಾನವನ್ನು ಒದಗಿಸುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.
ಬಜೆಟ್ ಘೋಷಣೆ ಏನು?
ಸರ್ಕಾರವು Karnataka Clean Mobility Policy 2025-30 ಘೋಷಿಸಿದ್ದು, ಇದರಿಂದ ಕ್ಲೀನ್ ಮೊಬಿಲಿಟಿ ವಾಹನ ಮೌಲ್ಯ ಸರಪಳಿಯಲ್ಲಿ 50,000 ಕೋಟಿ ರೂ. ಹೂಡಿಕೆ ಆಕರ್ಷಿಸುವ ಹಾಗೂ ಸರಿಸುಮಾರು ಒಂದು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಉದ್ದೇಶ ಹೊಂದಿದೆ. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ Foxconn ಸಂಸ್ಥೆಯಿಂದ 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಷ್ಟಿಯನ್ನು ನಿರೀಕ್ಷಿಸಲಾಗಿದೆ. ಈ ಕಂಪನಿಗೆ ಇ.ಎಸ್.ಡಿ.ಎಂನ ನೀತಿಯಡಿ 6,970 ಕೋಟಿ ರೂ.ಗಳ ಪ್ರೋತ್ಸಾಹ ಧನ ನೀಡಲು ಸರ್ಕಾರ ಮುಂದಾಗಿದೆ.
Advertisement
ಡಿಸೆಂಬರ್ 2024ರ ಅಂತ್ಯದ ವೇಳೆಗೆ 440 ಕೋಟಿ ರೂ ವಿದೇಶಿ ಹೂಡಿಕೆ ಆಕರ್ಷಿಸುವುದರೊಂದಿಗೆ ಕರ್ನಾಟಕ ದೇಶದಲ್ಲಿ 3ನೇ ಸ್ಥಾನ ಪಡೆದಿದೆ. 88,853 ಮಿಲಿಯನ್ ಡಾಲರ್ ರಫ್ತು ಮಾಡುವುದರೊಂದಿಗೆ ಒಟ್ಟಾರೆ ರಫ್ತನಲ್ಲಿ ಅಗ್ರಸ್ಥಾನದಲ್ಲಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಒಟ್ಟಾರೆ ರಫ್ತನಲ್ಲಿ ರಾಜ್ಯವು 11.17% ರಷ್ಟು ಬೆಳವಣಿಗೆ ಸಾಧಿಸಿರುತ್ತದೆ. ಕರ್ನಾಟಕ ರಾಜ್ಯವು ಕೇಂದ್ರ ಸರ್ಕಾರದ Ease of Doing Business ನಲ್ಲಿಯೂ ಅತ್ಯುತ್ತಮ ಸಾಧಕ (Top Achiever) ಎಂದು ಗುರುತಿಸಲ್ಪಟ್ಟಿದೆ.
Advertisement
Advertisement
ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಬಂಡವಾಳವನ್ನು ರಾಜ್ಯಕ್ಕೆ ಆಕರ್ಷಿಸುವ ಸಂಬಂಧ ಏರ್ಪಡಿಸಿದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Invest Karnataka-2025) ವಿವಿಧ ಕಂಪನಿಗಳೊಂದಿಗೆ 10.27 ಲಕ್ಷ ಕೋಟಿ ರೂ. ಹೂಡಿಕೆಗೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇದರಿಂದ 6 ಲಕ್ಷಕ್ಕಿಂತ ಹೆಚ್ಚಿನ ಉದ್ಯೋಗವಕಾಶ ನಿರೀಕ್ಷಿಸಲಾಗಿದೆ.
Advertisement
ರಾಜ್ಯದಲ್ಲಿ ಕೈಗಾರಿಕೆಗಳಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ ಘೋಷಿಸಲಾದ ಹೊಸ ಕೈಗಾರಿಕಾ ನೀತಿ 2025-30 ರಿಂದ 7.50 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ 20 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ನಿರೀಕ್ಷೆ ಹೊಂದಿದೆ.