ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ದಾಖಲೆಯ 17ನೇ ಬಜೆಟ್ (Karnataka Budget 2026) ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರವಿದ್ದು, ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಡಿಜಿಟಲ್ ಡಿಸ್ಪ್ಲೆ, ಪರದೆಗಳ ಮೂಲಕ ಬಜೆಟ್ ನೇರ ಪ್ರಸಾರ ಆಗಲಿದೆ.
ಬೆಂಗಳೂರಿನ 6 ಬಸ್ ನಿಲ್ದಾಣಗಳಲ್ಲಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರವಿದೆ.
ಹಣಕಾಸು ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಭದ್ರತೆಯೊಂದಿಗೆ ಬಜೆಟ್ ಪ್ರತಿಗಳನ್ನು ತಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಕೆಂಪು ಬಣ್ಣದ ಲೆದರ್ ಬ್ಯಾಗ್‌ನಲ್ಲಿ ಸಿಎಂ ಬಜೆಟ್ ಪುಸ್ತಕ ಪ್ರದರ್ಶಿಸಿದರು. ಬಳಿಕ ಬಜೆಟ್‌ಗೆ ಕ್ಯಾಬಿನೆಟ್‌ನಲ್ಲಿ ಸಿಎಂ ಅನುಮೋದನೆ ಪಡೆದರು.


