ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ (BPL Card) ಮಾಸಿಕ ಅಕ್ಕಿ (Ration) 5ರಿಂದ 6 ಕೆ.ಜಿಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
2023-24ನೇ ಸಾಲಿನ ರಾಜ್ಯ ಬಜೆಟ್ (Karnataka Budget 2023) ಮಂಡಿಸಿದ ಅವರು, ನಮ್ಮ ಸರ್ಕಾರವು ನಾಡಿನ ಪ್ರತಿಯೊಬ್ಬ ನಾಗರಿಕನಿಗೂ ಆಹಾರ ಭದ್ರತೆ ನೀಡಲು ಬದ್ಧವಾಗಿದೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಕೇಂದ್ರ ಸರ್ಕಾರವು ಹೆಚ್ಚುವರಿ ಆಹಾರ ಧಾನ್ಯ ವಿತರಿಸಿತ್ತು. ಇದರೊಂದಿಗೆ ರಾಜ್ಯ ಸರ್ಕಾರವು ಅಕ್ಕಿಯೊಂದಿಗೆ ಸ್ಥಳೀಯ ಪ್ರಮುಖ ಆಹಾರ ಧಾನ್ಯಗಳಾದ ರಾಗಿ ಹಾಗೂ ಜೋಳವನ್ನು ಸಹ ಪಡಿತರ ವ್ಯವಸ್ಥೆಯಡಿ ವಿತರಿಸಿ, ರಾಜ್ಯದ ರೈತರಿಗೆ ಹೆಚ್ಚುವರಿ ನೆರವು ನೀಡಿದೆ. ಸ್ಥಳೀಯ ಧಾನ್ಯಗಳ ವಿತರಣೆಯನ್ನು ಈ ವರ್ಷವೂ ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕರ್ನಾಟಕ ಬಜೆಟ್ ಹೊಸ ಯೋಜನೆಗಳು – ಯಾರಿಗೆ ಏನು ಸಿಕ್ಕಿದೆ?
2013-14ರಿಂದ 2017-18ನೇ ಸಾಲಿನವರೆಗೆ 5 ವರ್ಷಗಳ ಅವಧಿಯಲ್ಲಿ 1.2 ಕೋಟಿ ಮೆಟ್ರಿಕ್ ಟನ್‌ಗಳ ಅಕ್ಕಿಯನ್ನು ವಿತರಿಸಲಾಗಿತ್ತು. ನಮ್ಮ ಸರ್ಕಾರವು ಕೇವಲ ನಾಲ್ಕು ವರ್ಷಗಳ ಅವಧಿಯಲ್ಲಿ 1.5 ಕೋಟಿ ಮೆಟ್ರಿಕ್ ಟನ್ ಅಕ್ಕಿಯನ್ನು ವಿತರಿಸಿದೆ ಎಂದು ಮಾಹಿತಿ ನೀಡಿದರು.
NFSA ಅಡಿಯಲ್ಲಿ ಪ್ರತಿ ಫಲಾನುಭವಿಗೆ ನೀಡುತ್ತಿರುವ 5 ಕೆ.ಜಿ ಆಹಾರ ಧಾನ್ಯಗಳ ಜೊತೆಯಲ್ಲಿ ಒಂದು ಕೆ.ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಲು 2023-34ನೇ ವರ್ಷದಲ್ಲಿ 4,000 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k