ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2022-23 ಸಾಲಿನ ಆಯವ್ಯಯ ರಾಜ್ಯದ ಎಲ್ಲಾ ಭಾಗಗಳ ಸಮಗ್ರ ಅಭಿವೃದ್ಧಿ ದೃಷ್ಟಿಕೋನವನ್ನು ಹೊಂದಿದ್ದು, ಪ್ರಗತಿಗೆ ಪೂರಕವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಇದೊಂದು ಅಭಿವೃದ್ಧಿ ಪೂರಕ, ಚಲನಶೀಲ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಭರವಸೆ ಮೂಡಿಸುವ ಆಯವ್ಯಯವಾಗಿದೆ. ಮಾರಕ ಕೊರೊನಾ ಸಾಂಕ್ರಮಿಕ ರೋಗದಿಂದ ಕರ್ನಾಟಕವೂ ಸೇರಿದಂತೆ ಇಡೀ ವಿಶ್ವವೇ ಆರ್ಥಿಕವಾಗಿ ತತ್ತರಿಸಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ತಮಗಿರುವ ಅಪಾರ ಆಡಳಿತ ಜ್ಞಾನ ಹಾಗೂ ಸಾಂವಿಧಾನಿಕ ಅನುಭವದ ಸ್ಪರ್ಶವನ್ನು ಆಯವ್ಯಯದಲ್ಲಿ ಕಾಣಿಸಿದ್ದಾರೆ ಎಂದರು. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ
Advertisement
Advertisement
ಅಭಿವೃದ್ಧಿಯಲ್ಲಿ ಇಡೀ ರಾಷ್ಟ್ರದಲ್ಲಿಯೇ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಆರ್ಥಿಕತೆಯ ಬೆನ್ನೆಲುಬಾಗಿರುವ ಮಾನವ ಸಂಪನ್ಮೂಲ, ಇಂಧನ, ನೀರವಾರಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಹಿಂದುಳಿದ, ಪರಿಶಿಷ್ಟ ಜಾತಿ ಜನಾಂಗ ಹಾಗೂ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳಿಗೆ ಹೊಸ ಚೈತನ್ಯ ಒದಗಿಸುವ ನಿಟ್ಟಿನಲ್ಲಿ ಈ ಆಯವ್ಯಯ ಭರವಸೆಯ ಬೆಳಕು ಎನಿಸಲಿದೆ ಎಂದು ಆರಗ ಜ್ಞಾನೇಂದ್ರ ನುಡಿದರು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ