ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ 2022-23ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
2022-23ನೇ ಸಾಲಿನಲ್ಲಿ ರಾಜ್ಯದ ಅರ್ಥ ವ್ಯವಸ್ಥೆಯು ಚೇತರಿಕೆಯತ್ತ ಸಾಗಿದೆ. ಈ ಸನ್ನಿವೇಶದಲ್ಲಿ ರಾಜ್ಯದ ಜನಸಾಮಾನ್ಯರ ಮೇಲೆ ಇನ್ನಷ್ಟು ತೆರಿಗೆ ವಿಧಿಸಲು ಇಚ್ಛಿಸುವುದಿಲ್ಲ. ಆದ್ದರಿಂದ ಎಲ್ಲಾ ತೆರಿಗೆ ಸಂಗ್ರಹ ಇಲಾಖೆಗಳಲ್ಲಿ ಹೆಚ್ಚಿನ ದಕ್ಷತೆಯನ್ನು ತರುವ ಮೂಲಕ ಸಂಪನ್ಮೂಲಗಳ ಸಂಗ್ರಹಣಾ ಗುರಿಗಳನ್ನು ಸಾಧಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
Advertisement
2022-23ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆ 77,010 ಕೋಟಿ ರೂ., ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ., ರಾಜ್ಯ ಅಬಕಾರಿ ಇಲಾಖೆಗೆ 29,000 ಕೋಟಿ ರೂ. ಹಾಗೂ ಸಾರಿಗೆ ಇಲಾಖೆಗೆ 8,007 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
Advertisement
ಕೋವಿಡ್‌ನಿಂದಾಗಿ ಎಲ್ಲಾ ಕ್ಷೇತ್ರಗಳು ಸಂಕಷ್ಟ ಎದುರಿಸಿವೆ. ಇಂತಹ ಸನ್ನಿವೇಶದಲ್ಲಿ ತೆರಿಗೆ ಬರೆ ಹಾಕುವುದು ಸರಿಯಲ್ಲ. ಆರ್ಥಿಕ ಪುನಶ್ಚೇತನಕ್ಕೆ ಸಹಕಾರ ನೀಡುವ ಕಾರ್ಯ ಅಗತ್ಯ ಎನ್ನುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಕೈಗೊಂಡಿದೆ ಎನ್ನಲಾಗಿದೆ.