ಬೆಂಗಳೂರು: ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಈ ಕಾಲೇಜುಗಳಲ್ಲಿ ಇನ್ನು ಮುಂದೆ ಶುಲ್ಕವಿಲ್ಲದೇ ಪ್ರವೇಶ ಪಡೆಯಬಹುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಬೊಮ್ಮಾಯಿ, ರಾಜ್ಯದ ಶಿಕ್ಷಣ ವಲಯದಲ್ಲಿ ಈ ದಿನ ಅವಿಸ್ಮರಣೀಯ ದಿನವಾಗಲಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ‘ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ ಎಂಂದು ತಿಳಿಸಿದರು. ಇದನ್ನೂ ಓದಿ: Karnataka Budget 2023: ದೋಣಿಗಳಲ್ಲಿ ಪೆಟ್ರೋಲ್, ಡೀಸೆಲ್ ಇಂಜಿನ್ ಅಳವಡಿಕೆಗೆ 50 ಸಾವಿರ ಸಹಾಯಧನ
Advertisement
Advertisement
ಬಜೆಟ್ ಮುಖ್ಯಾಂಶಗಳು
ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್‍ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊ.ಸಿ.ಎನ್.ಆರ್.ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗುವುದು.
Advertisement
‘ಹಳ್ಳಿ ಮುತ್ತು’ ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು ಸಿಇಟಿ ಮೂಲಕ ಸರ್ಕಾರಿ ಕೋಟದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k