ಬೆಂಗಳೂರು: ಫೆಬ್ರವರಿ 16 ರಂದು ರಾಜ್ಯ ಬಜೆಟ್ (Karnataka Budget) ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಈ ಸಂಬಂಧ ಇಂದಿನ ಸಚಿವ ಸಂಪುಟಲ್ಲಿ ಚರ್ಚೆ ನಡೆದಿದ್ದು, ಮುಂದಿನ ತಿಂಗಳು ಅಂದರೆ ಫೆಬ್ರವರಿ 12 ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ತೀರ್ಮಾನಿಸಲಾಗಿದೆ.
ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ಅಂದರೆ ಫೆ.12 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಮುಂದೆ ಲೋಕಸಭಾ ಚುನಾವಣೆ ಬರಲಿದೆ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಜ.22ರಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ