ಬೆಂಗಳೂರು: ಕೇಂದ್ರ ಸರ್ಕಾರಕ್ಕೆ 15 ಪತ್ರ ಬರೆದರೂ ಬರ ಪರಿಹಾರಕ್ಕೆ ಇದೂವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Cheluvarayaswamy) ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.
ವಿಧಾನ ಪರಿಷತ್ (Vidhan Parishad) ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ (JDS) ಶರವಣ ತೋಟಗಾರಿಕೆ ಬೆಲೆ ನಷ್ಟ ಮತ್ತು ಪರಿಹಾರದ ಬಗ್ಗೆ ಪ್ರಶ್ನೆ ಕೇಳಿದರು. ಇದನ್ನೂ ಓದಿ: ಕೇಂದ್ರ ಸರ್ಕಾರ ಪ್ರಚಾರಕ್ಕಾಗಿ ಭಾರತ್ ರೈಸ್ ಕೊಡ್ತಿದೆ – ಮುನಿಯಪ್ಪ ಕಿಡಿ
Advertisement
Advertisement
ಇದಕ್ಕೆ ಉತ್ತರ ನೀಡಿದ ಚೆಲುವರಾಯಸ್ವಾಮಿ, ರಾಜ್ಯದಲ್ಲಿ ತೀವ್ರ ಬರಗಾಲದಿಂದ (Drought) 5,11,208 ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ. ಕೇಂದ್ರಕ್ಕೆ ಪರಿಹಾರಕ್ಕಾಗಿ ಪತ್ರ ಬರೆದು 5 ತಿಂಗಳು ಆಗಿದೆ. ಈವರೆಗೂ ಕೇಂದ್ರ ಸರ್ಕಾರ (Union Government) ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಈವರೆಗೂ 15 ಪತ್ರ ಕೇಂದ್ರಕ್ಕೆ ಬರೆಯಲಾಗಿದೆ. ಸಿಎಂ ಅವರು ಪ್ರಧಾನಿ, ಅಮಿತ್ ಶಾ ಅವರಿಗೆ ಮನವಿ ಮಾಡಿದರೂ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಸಭೆ ಮಾಡುತ್ತೇನೆ ಎಂದರೂ ಸಭೆ ಮಾಡಿಲ್ಲ. ಕೇಂದ್ರದ ಬರ ಅಧ್ಯಯನ ತಂಡವೇ ವರದಿ ಕೊಟ್ಟರೂ ಕೇಂದ್ರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಪರೀಕ್ಷೆ ವೇಳೆ ಲೋಡ್ ಶೆಡ್ಡಿಂಗ್ – ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿದ್ದಾರೆ ವಿದ್ಯಾರ್ಥಿನಿಯರು
Advertisement
ನಾವು ಗ್ಯಾರಂಟಿ ಯೋಜನೆಗಳಿಂದ ಹಣ ಇಲ್ಲ ಎಂದು ಎಲ್ಲೂ ಹೇಳಿಲ್ಲ.ಕೇಂದ್ರ ಸರ್ಕಾರ ಪರಿಹಾರ ಕೊಡದೇ ಹೋದರೂ ರಾಜ್ಯ ಸರ್ಕಾರ 2 ಸಾವಿರ ಪರಿಹಾರ ಹಣ ಕೊಡಲಾಗುತ್ತಿದೆ. ಇಲ್ಲಿಯವರೆಗೆ 30,24,795 ರೈತರಿಗೆ 573.28 ಕೋಟಿ ಪರಿಹಾರ ನೀಡಲಾಗಿದೆ. ಕೇಂದ್ರ ಸರ್ಕಾರದ ನಿರೀಕ್ಷೆಯಲ್ಲಿ ಇದ್ದೇವೆ.ಪರಿಹಾರ ಬಂದ ಕೂಡಲೇ ರೈತರಿಗೆ ಪರಿಹಾರ ಬಿಡುಗಡೆ ಮಾಡ್ತೀವಿ ಅಂತ ತಿಳಿಸಿದರು.
Advertisement