ಬೆಂಗಳೂರು: ಬೈ ಎಲೆಕ್ಷನ್ ಬ್ಯಾಟೆಲ್‍ಗೆ ಎರಡು ರಾಷ್ಟ್ರೀಯ ಪಕ್ಷಗಳು ಇಂದು ಅಭ್ಯರ್ಥಿಗಳನ್ನ ಅಂತಿಮಗೊಳಿಸುವ ಸಾಧ್ಯತೆ ಇದೆ.
ಎರಡು ವಿಧಾನಸಭಾ, ಮೂರು ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಕಣಕ್ಕಿಳಿಸೋದು ಪಕ್ಕಾ ಆಗಿದೆ. ಜಮಖಂಡಿ ಮತ್ತು ಬಳ್ಳಾರಿ ಕ್ಷೇತ್ರದಲ್ಲಿ ಕಾಂಗ್ರೆಸ್, ರಾಮನಗರ ಹಾಗು ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡುವ ಸಾಧ್ಯತೆಗಳಿವೆ. ಆದರೆ ಶಿವಮೊಗ್ಗದಲ್ಲಿ ಬಿಜೆಪಿ ಎದುರಾಳಿ ಯಾರಾಗಬೇಕು ಅನ್ನೋದರ ಬಗ್ಗೆ ಮೈತ್ರಿ ಮಾತುಕತೆ ಅಂತಿಮವಾಗಿಲ್ಲ.
Advertisement
Advertisement
ಈ ನಡುವೆ ಇವತ್ತು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗಪಾಲ್ ನೇತೃತ್ವದಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಉಪಚುನಾವಣೆ ನಡೆಯುವ ಕ್ಷೇತ್ರಗಳ ಮುಖಂಡರ ಸಭೆ ನಡೆಯಲಿದೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರ, ಮೈತ್ರಿ ವಿಚಾರ ಪ್ರಸ್ತಾಪವಾಗಲಿದೆ. ಇನ್ನೊಂದೆಡೆ ಬಿಜೆಪಿ ಕೂಡ ಇವತ್ತೇ ಅಭ್ಯರ್ಥಿಗಳನ್ನ ಅಂತಿಮಗೊಳಿಸುವ ಸಾಧ್ಯತೆ ಇದೆ.
Advertisement
ಇಂದು ಸಂಜೆ ನಾಲ್ಕು ಗಂಟೆಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್‍ಕಮಿಟಿ ಸಭೆ ನಡೆಯಲಿದೆ. ಬಿಎಸ್ ಯಡಿಯೂರಪ್ಪವರ ನೇತೃತ್ವದಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನ ಅಂತಿಮಗೊಳಿಸಿ ಹೈಕಮಾಂಡ್‍ಗೆ ಹೆಸರುಗಳನ್ನ ಶಿಫಾರಸ್ಸು ಮಾಡಲಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv