– ಮೂರು ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು ಎನ್ನುತ್ತಿದ್ದಾರೆ ಎನ್‌ಡಿಎ ನಾಯಕರು
– ಸಮೀಕ್ಷೆಗಳು ಹಿಂದೆ ಸುಳ್ಳಾಗಿವೆ ಎಂದ ಕಾಂಗ್ರೆಸ್
ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ (Congress) ಬಿಗ್ ಶಾಕ್ ಸಿಗುವ ಸಾಧ್ಯತೆಯಿದೆ.
ಹೌದು, ವಿಧಾನಸಭಾ ಚುನಾವಣೆಯಲ್ಲಿ (Vidhan Sabha Election) 136 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಆದರೆ ಸಮೀಕ್ಷೆಯಲ್ಲಿ ಸಂಡೂರು ಮಾತ್ರ ಈ ಬಾರಿ ಕೈ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ.
Advertisement
ಪಿ-ಮಾರ್ಕ್ ಸಮೀಕ್ಷೆ ಚನ್ನಪಟ್ಟಣದಲ್ಲಿ ಜೆಡಿಎಸ್, ಶಿಗ್ಗಾವಿಯಲ್ಲಿ ಬಿಜೆಪಿ, ಸಂಡೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದೆ. ಉಪಚುನಾವಣೆಯ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ನೋಡಿ ಎನ್‌ಡಿಎ ಮೈತ್ರಿಕೂಟದಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ ಕಾಂಗ್ರೆಸ್ ಸಮೀಕ್ಷಾ ವರದಿಯನ್ನು ಒಪ್ಪಿಕೊಂಡಿಲ್ಲ. ಹಿಂದೆ ಹಲವಾರು ಸಮೀಕ್ಷೆಗಳು ಸುಳ್ಳಾಗಿವೆ. ಹೀಗಾಗಿ ಈ ಬಾರಿ ಮೂರಕ್ಕೆ ಮೂರು ಸ್ಥಾನ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಇದನ್ನೂ ಓದಿ: PUBLiC TV Impact | ರದ್ದಾದ ಅರ್ಹ ಬಿಪಿಎಲ್ ಕಾರ್ಡ್ ವಾಪಸ್‌ಗೆ ಸಿಎಂ ಆದೇಶ
Advertisement
Advertisement
ಎನ್‌ಡಿಎ ಪಾಳೆಯದಲ್ಲಿ ವಿಶ್ವಾಸ:
ಶಿಗ್ಗಾಂವಿ (Shiggaon) ಗೆಲುವು ನಿಶ್ಚಿತ ಎನ್ನುವ ವಿಶ್ವಾಸದಲ್ಲಿ ಮೈತ್ರಿ ನಾಯಕರಿದ್ದಾರೆ. ಸಂಸದ ಬೊಮ್ಮಾಯಿ ಸ್ವಕ್ಷೇತ್ರದ ಮೇಲೆ ಹಿಡಿತ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ ಬಿಜೆಪಿಗೆ ಪ್ಲಸ್ ಆಗಲಿದೆ ಎನ್ನುವ ಲೆಕ್ಕಾಚಾರವನ್ನು ಹಾಕಿಕೊಂಡಿದ್ದಾರೆ. ಇದನ್ನೂ ಓದಿ: Maharashtra Exit Polls: ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಮುನ್ನಡೆ
Advertisement
ಸಂಡೂರಿನಲ್ಲೂ (Sanduru) ಈ ಬಾರಿ ಅಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಆಂತರಿಕ ಕಚ್ಚಾಟ ನಮಗೆ ಪೂರಕ ಆಗಲಿದೆ. ಜನಾರ್ದನ ರೆಡ್ಡಿ ಕಮಾಲ್ ಮಾಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: Jharkhand Exit Polls: ಜಾರ್ಖಂಡ್‌ನಲ್ಲಿ ಎನ್‌ಡಿಎ v/s ‘ಇಂಡಿಯಾ’ ಕೂಟ – ಜಿದ್ದಾಜಿದ್ದಿನ ಹೋರಾಟದಲ್ಲಿ ಗೆಲ್ಲೋದ್ಯಾರು?
ಚನ್ನಪಟ್ಟಣದಲ್ಲಿ (Channapatna) ನಿಖಿಲ್ ಜಯಗಳಿಸಲಿದ್ದಾರೆ. ಜಮೀರ್ ಹೇಳಿಕೆಗಳು, ದೇವೇಗೌಡರ ಪ್ರವೇಶ, ನಿಖಿಲ್ ಮೇಲೆ ಅನುಕಂಪ ಎಲ್ಲ ಕೆಲಸ ಮಾಡಲಿದೆ. ಯೋಗೇಶ್ವರ್ ಕೊನೆ ಕ್ಷಣದಲ್ಲಿ ಸೇರಿದ್ದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ. ನಮ್ಮ ಒಗ್ಗಟ್ಟಿನ ಶ್ರಮ ಕೈ ಹಿಡಿಯಲಿದೆ ಎಂದು ದೋಸ್ತಿ ನಾಯಕರು ಹೇಳುತ್ತಿದ್ದಾರೆ.