ಬೆಂಗಳೂರು: ಉಪಚುನಾವಣೆಯ ಸೋಲಿನ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಜನತಾ ನ್ಯಾಯಾಲಯ ಒಳ್ಳೆಯ ತೀರ್ಪು ನೀಡುತ್ತೆ ಎಂಬ ನಿರೀಕ್ಷೆಗಳಿದ್ದವು. ಉಪ ಚುನಾವಣೆಯಲ್ಲಿಯೂ ಎಲ್ಲ ನಾಯಕರು ಶಕ್ತಿಮೀರಿ ಕೆಲಸ ಮಾಡಿದ್ದಾರೆ. ಚುನಾವಣೆಯಲ್ಲಿ ನಾವು ಗೆಲ್ಲಬೇಕು, ನಮಗೆ ಮೋಸ ಮಾಡಿದವರನ್ನು ಸೋಲಿಸಬೇಕೆಂದು ಎಲ್ಲರೂ ಪ್ರಯತ್ನ ಮಾಡಿದ್ದಾರೆ. ಎಲ್ಲರ ಇಚ್ಛಾನುಸಾರವಾಗಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಆದ್ರೆ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬರಲಿಲ್ಲ. ನಮ್ಮ ಪಕ್ಷಕ್ಕೆ ಮೋಸ ಮಾಡಿದವರು ಗೆದ್ದಾಗ ನೋವು ಆಗುತ್ತದೆ. ಆದ್ರೂ ಗೆದ್ದ ಎಲ್ಲ ಅಭ್ಯರ್ಥಿಗಳಿಗೂ ನಾನು ಶುಭಾಶಯ ತಿಳಿಸುತ್ತೇನೆ ಎಂದರು.
Advertisement
ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆhttps://t.co/G0qXgpggfb#Siddaramaiah #Congress #KarnatakaByElection #SiddaramaiahResign
— PublicTV (@publictvnews) December 9, 2019
Advertisement
ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಮತದಾರರು ನೀಡಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ನೀಡುತ್ತಾರೆಂಬ ನಿರೀಕ್ಷೆ ಇತ್ತು. ಇಂದು ನನ್ನ ನಿರೀಕ್ಷೆ ಹುಸಿಯಾಗಿದ್ದು, ಜನಾದೇಶವನ್ನು ಒಪ್ಪಿಕೊಂಡಿದ್ದೇನೆ. ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜೀನಾಮೆ ಪತ್ರದ ಒಂದು ಪ್ರತಿಯನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ನಾಯಕ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರವಾನಿಸಿದ್ದೇನೆ ಎಂದು ತಿಳಿಸಿದ್ದರು.
Advertisement
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ: ದಿನೇಶ್ ಗುಂಡೂರಾವ್ #KarnatakaByelection #KarnatakaBypolls @INCKarnataka
— PublicTV (@publictvnews) December 9, 2019