ಬೆಂಗಳೂರು: ಶಿಗ್ಗಾಂವಿಯಲ್ಲಿ (Shiggaon) ಬಿಜೆಪಿಯ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ (Sandur) ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 205 ಮತಗಳ ಮುನ್ನಡೆ ಸಾಧಿಸಿದರೆ ಭರತ್ ಬೊಮ್ಮಾಯಿಗೆ 1,567 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ (Channapatna) ನಿಖಿಲ್ ಕುಮಾರಸ್ವಾಮಿ ಅವರು 1,155ಮತಗಳ ಮುನ್ನಡೆ ಸಾಧಿಸಿದ್ದು, ಸಿಪಿ ಯೋಗೇಶ್ವರ್ ಹಿನ್ನಡೆ ಅನುಭವಿಸಿದ್ದಾರೆ.
ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರದ ಮತಎಣಿಕೆ ನಡೆಯುತ್ತಿದ್ದರೆ ಹಾವೇರಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರುಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ.