ಬೆಳಗಾವಿ: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಇಂದು ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಸೋದರರಿಬ್ಬರು ಕಣಕ್ಕೆ ಇಳಿದಿರೋದರಿಂದ ಗೋಕಾಕ್ ಕ್ಷೇತ್ರ ಹೈವೋಲ್ಟೇಜ್ ಕಣವಾಗಿದೆ. ಇಂದು ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್‍ನಿಂದ ಲಖನ್ ಜಾರಕಿಹೊಳಿ ಮತ್ತು ಜೆಡಿಎಸ್ ನಿಂದ ಅಶೋಕ್ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ. ಸೋದರ ಲಖನ್ ಜಾರಕಿಹೊಳಿ ಜೊತೆ ಬಂದ ಸತೀಶ್ ಜಾರಕಿಹೊಳಿ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
Advertisement
Advertisement
ಒಂದು ವೇಳೆ ಲಖನ್ ಜಾರಕಿಹೊಳಿ ನಾಮಪತ್ರ ತಿರಸ್ಕøತವಾದ್ರೆ, ಸತೀಶ್ ಅವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ತಂತ್ರ ರಚಿಸಿಕೊಂಡಿದೆ ಎನ್ನಲಾಗುತ್ತಿದೆ. ಇತ್ತ ಮೂವರ ಅಭ್ಯರ್ಥಿಗಳ ಹೆಸರಿನ ಕೊನೆಗೆ ‘ಜಾರಕಿಹೊಳಿ’ ಎಂದು ಇರೋದರಿಂದ ಮತದಾರರು ಗೊಂದಲಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಸಹೋದರ ಲಖನ್ ಜೊತೆ ಸತೀಶ್ ಅವರು ನಾಮಪತ್ರ ಸಲ್ಲಿಕೆ ಮಾಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಮಂಡ್ಯ ಲೋಕಸಭಾ ಅಖಾಡದಲ್ಲಿ ಒಂದೇ ಹೆಸರಿನ ನಾಲ್ವರು ಅಭ್ಯರ್ಥಿಗಳು