ಬೆಂಗಳೂರು: ಉಪಚುನಾವಣೆ ರಣರಂಗದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಏಕಾಂಗಿಯಾದ್ರಾ ಎಂಬ ಪ್ರಶ್ನೆಯೊಂದು ಕಾಂಗ್ರೆಸ್ ಅಂಗಳದಲ್ಲಿ ಹರಿದಾಡುತ್ತಿದೆ.
ಚುನಾವಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಸ್ಥಳೀಯ ಮಟ್ಟದ ಕಾರ್ಯಕರ್ತರೊಂದಿಗೆ ಸಭೆಗಳನ್ನು ನಡೆಸುತ್ತಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮೊದಲ ಹಂತದ ಪಟ್ಟಿಯಲ್ಲಿ ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದರು. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂದು ಉಳಿದ ನಾಯಕರು ಸಿದ್ದರಾಮಯ್ಯನವರ ಮೇಲೆ ಮುನಿಸಿಕೊಂಡಿದ್ದಾರಂತೆ. ಹಾಗಾಗಿ ಚುನಾವಣೆ ಪ್ರಚಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಸಹ ಚುನಾವಣೆ ರಣರಂಗದಿಂದ ಹಿಂದೆ ಸರಿದಿದ್ದು ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಹೈಕಮಾಂಡ್ ಸೂಚನೆ ನೀಡಿದರೂ ಮಾಜಿ ಡಿಸಿಎಂ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ಮುಖಂಡರು ಸಿದ್ದರಾಮಯ್ಯನವರಿಂದ ದೂರ ಉಳಿದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ.