ಬೆಂಗಳೂರು: ಕರ್ನಾಟಕದ (Karnataka) ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ (By-Election) ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ (BJP) ತಂಡ ರಚನೆ ಮಾಡಿದೆ.
ಚನ್ನಪಟ್ಟಣ (Channapatna) ಕ್ಷೇತ್ರಕ್ಕೆ ಡಾ.ಸಿ.ಎನ್.ಅಶ್ವತ್‌ನಾರಾಯಣ, ಸಂಡೂರಿಗೆ (Sanduru) ಸಿ ಟಿ ರವಿ, ಶಿಗ್ಗಾವಿಗೆ (Shiggaon) ಆರ್ ಅಶೋಕ್ ನೇತೃತ್ವದ ತಂಡವನ್ನು ರಚನೆ ಮಾಡಲಾಗಿದೆ.
ಕ್ಷೇತ್ರಗಳಿಗೆ ತೆರಳಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ. ವರದಿಗಳು ಪೂರ್ಣಗೊಂಡ ಬಳಿಕ ಹೈಕಮಾಂಡ್‌ಗೆ ಕಳಿಸಲು ಬಿಜೆಪಿ ನಿರ್ಧಾರ ಮಾಡಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ರೋಹಿತ್ – ವೇದಿಕೆಯಲ್ಲಿ ಕೊಹ್ಲಿ ಭಾವುಕ!
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. 2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತವಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: UK General Elections 2024: ಸೋಲಿನತ್ತ ರಿಷಿ ಸುನಕ್ ಪಕ್ಷ, ಭರ್ಜರಿ ಜಯದತ್ತ ಲೇಬರ್ ಪಾರ್ಟಿ
ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.
ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.