ಬೆಂಗಳೂರು: ಉಪಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್‍ನಲ್ಲಿ ಹೊಸ ಲೆಕ್ಕಾಚಾರ ಆರಂಭಗೊಂಡಿದೆ. ಆಗಿರುವ ನಷ್ಟ ಭರ್ತಿಗೆ ಹೊಸ ಸೂತ್ರ ಹುಡುಕುತ್ತಿದೆ.
ಮುಂದೆ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಾತಿ ಸಮೀಕರಣ ಸೂತ್ರದ ಮೊರೆ ಹೋಗಿದೆ. ಹೊಸ ಜಾತಿ ಸಮೀಕರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
Advertisement
Advertisement
ಕಾಂಗ್ರೆಸ್ ಮೂರು ಪ್ರಮುಖ ಸ್ಥಾನಗಳು ಖಾಲಿ ಉಳಿದಿವೆ. ಶಾಸಕಾಂಗ ಪಕ್ಷದ ನಾಯಕ ಸ್ಥಾನ, ವಿರೋಧ ಪಕ್ಷದ ನಾಯಕ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ದೊಡ್ಡ ಸಮುದಾಯದ ನಾಯಕರಿಗೆ ಮಣೆ ಹಾಕಲು ಮುಂದಾಗುತ್ತಿದೆ.
Advertisement
ಒಕ್ಕಲಿಗ, ಲಿಂಗಾಯತ, ದಲಿತ ಸಮುದಾಯ ನಾಯಕರಿಗೆ ಹುದ್ದೆ ಸಿಗುವ ಸಾಧ್ಯತೆಯಿದೆ. ಈ ಜಾತಿ ಸಮೀಕರಣ ಮೂಲಕ ಹೊಸ ಚೈತನ್ಯ ಕಂಡುಕೊಳ್ಳಲು ಕಾಂಗ್ರೆಸ್ ಈ ಮೂಲಕ ತಂತ್ರ ಹೆಣೆದಿದೆ. ಇದನ್ನೂ ಓದಿ: ಸಚಿವ ಸ್ಥಾನ ಸಿಗುವುದು ಪಕ್ಕಾ, ಆದ್ರೆ ಲೆಕ್ಕನೇ ಬೇರೆ – ಯಾರಿಗೆ ಯಾವ ಖಾತೆ ಮೇಲೆ ಕಣ್ಣು
Advertisement
ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಮತದಾರರು ನೀಡಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ನೀಡುತ್ತಾರೆಂಬ ನಿರೀಕ್ಷೆ ಇತ್ತು. ಇಂದು ನನ್ನ ನಿರೀಕ್ಷೆ ಹುಸಿಯಾಗಿದ್ದು, ಜನಾದೇಶವನ್ನು ಒಪ್ಪಿಕೊಂಡಿದ್ದೇನೆ. ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.