ಇನ್ಮುಂದೆ ಖಾಸಗಿ ಜಾಗದಲ್ಲಿ ಶ್ರೀಗಂಧ ಬೆಳೆದು ರೈತರೇ ಮಾರಾಟ ಮಾಡಬಹುದು

Public TV
1 Min Read
Karnataka cabinet allowed growers to sell sandalwood in open market

ಬೆಂಗಳೂರು: ಇನ್ನು ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ(Sandalwood) ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ(Open Market) ಮಾರಾಟ ಮಾಡಬಹುದು.

ರೈತರು(Farmers) ತಮ್ಮ ಹೊಲ ಗದ್ದೆಗಳಲ್ಲಿ ಶ್ರೀಗಂಧ ಬೆಳೆಯುವುದನ್ನು ಉತ್ತೇಜಿಸುವ ಜೊತೆಗೆ ಮಾರಾಟಕ್ಕೆ ಸರಳ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ರಾಜ್ಯ ಅರಣ್ಯ ಇಲಾಖೆ ಪ್ರಸ್ತಾಪಿಸಿದ ‘ಶ್ರೀಗಂಧ ನೀತಿ’ಯನ್ನು ಜಾರಿಮಾಡಲು ಕ್ಯಾಬಿನೆಟ್‌(Cabinet) ಅನುಮೋದನೆ ನೀಡಿದೆ.  ಇದನ್ನೂ ಓದಿ: BMTC ಬಸ್ ಗುದ್ದಿ ಗಾಯಗೊಂಡಿದ್ದ ಯೋಧ ಸಾವು

Sandalwood

2001ರಿಂದ ರಾಜ್ಯದಲ್ಲಿ ರೈತರು ಶ್ರೀಗಂಧ ಬೆಳೆಯಲು ಅನುಮತಿ ನೀಡಲಾಗಿದ್ದರೂ ಅವುಗಳ ಪೋಷಣೆ, ಸಂರಕ್ಷಣೆ, ಕಟಾವು ಮಾಡುವುದು ಮತ್ತು ಸೂಕ್ತ ಮಾರುಕಟ್ಟೆ ಸೌಲಭ್ಯಗಳನ್ನು ಅರಣ್ಯ ಇಲಾಖೆ ಕಲ್ಪಿಸಿರಲಿಲ್ಲ. ಸರ್ಕಾರದ ಈ ನಿರ್ಧಾರ ಶ್ರೀಗಂಧ ಬೆಳೆಯುವ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಮಸ್ಯೆ ಅರಿತ ಸರ್ಕಾರ ಮಾರಾಟಕ್ಕೂ ಅವಕಾಶ ನೀಡಿದೆ.

ಕ್ಯಾಬಿನೆಟ್‌ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಧಾಕರ್‌, ನಮಗೆ ಶ್ರೀಗಂಧದ ಕೊರತೆಯಿದೆ. ನಮ್ಮ ಸರ್ಕಾರಿ ಸಂಸ್ಥೆಗೂ ಮತ್ತು ಖಾಸಗಿ ಸಂಸ್ಥೆಗೂ ಶ್ರೀಗಂಧ ಅಗತ್ಯವಿದೆ. ಈ ಹಿಂದೆ ಮಾರಾಟಕ್ಕೆ ಕೆಲವು ನಿರ್ಬಂಧವಿತ್ತು. ಈಗ ಆ ನಿರ್ಬಂಧಗಳನ್ನು ತೆಗೆದು ಹೊಸ ಶ್ರೀಗಂಧ ನೀತಿ 2022 ಜಾರಿ ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

10 ವರ್ಷ ಬೆಳೆದ ಶ್ರೀಗಂಧಕ್ಕೆ ಸೂಕ್ತ ಬೆಲೆ ಲಭ್ಯವಾಗದೇ ರೈತರಿಗೆ ಸಮಸ್ಯೆಯಾಗಿತ್ತು. ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಶ್ರೀಗಂಧ ನೀತಿ ಜಾರಿ ತರಲು ಅರಣ್ಯ ಇಲಾಖೆ ಕರಡು ನೀತಿ ಸಿದ್ಧಪಡಿಸಿ ಅನುಮತಿ ಪಡೆಯಲು ಸರ್ಕಾರಕ್ಕೆ ಸಲ್ಲಿಸಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *