ರಾಯಚೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೇ ಇದ್ದರೂ ರಾಯಚೂರಿನ (Raichuru) ಎನ್.ಎಸ್.ಬೋಸರಾಜುಗೆ (NS Boseraju) ಸಚಿವ ಸ್ಥಾನ ಒಲಿದು ಬಂದಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಅನ್ನೋ ಕೂಗು ಜೋರಾಗಿದ್ದಕ್ಕೆ ರಾಯಚೂರು ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್.ಎಸ್.ಬೋಸರಾಜುಗೆ ಟಿಕೆಟ್ ಕೈ ತಪ್ಪಿತ್ತು. ಆದರೆ ಹೈಕಮಾಂಡ್ (Congress High Command) ಜೊತೆ ಉತ್ತಮ ಸಂಬಂಧ ಹೊಂದಿರುವ ಬೋಸರಾಜು ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊರಿಸಿ ಬೋಸರಾಜು ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಅಸ್ಲಂಪಾಶಾ ಪತ್ರ ಬರೆದ ಬೆನ್ನಲ್ಲೇ ಬೋಸರಾಜು ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾರೆ.
Advertisement
Advertisement
1999 ಹಾಗೂ 2004 ರಲ್ಲಿ ಮಾನ್ವಿ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದ ಇವರು 2014ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಸದ್ಯ ಎಐಸಿಸಿ ಕಾರ್ಯದರ್ಶಿಯಾಗಿರುವ (AICC Secretary) ಬೋಸರಾಜು ತೆಲಂಗಾಣ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 1972 ರಿಂದ ಸಕ್ರಿಯ ರಾಜಕಾರಣದಲ್ಲಿರುವ ಬೋಸರಾಜು ಸುಮಾರು 50 ವರ್ಷಗಳ ರಾಜಕೀಯ ಅನುಭವ ಹೊಂದಿದ್ದಾರೆ. ಇದನ್ನೂ ಓದಿ: ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವ ಸ್ಥಾನ ಮಿಸ್
Advertisement
Advertisement
1972 ರಿಂದ 1976 ರವರೆಗೆ ರಾಯಚೂರು ಜಿಲ್ಲೆ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, 1976 ರಿಂದ 1980 ರವರೆಗೆ ರಾಯಚೂರು ತಾಲೂಕು ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾಗಿ, 1980 ರಿಂದ 1991ರವರೆಗೆ ರಾಯಚೂರು ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, 1991 ರಿಂದ 2002 ರಾಯಚೂರು ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, 2009 ರಿಂದ 2017 ರವರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, 2017ರಿಂದ 2018 ರ ವರೆಗೆ ಕೆಪಿಸಿಸಿ ಉಪಾಧ್ಯಕ್ಷರಾಗಿ ಹಾಗೂ 2018 ರಿಂದ ಇಲ್ಲಿಯವರೆಗೆ ಎಐಸಿಸಿ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಮಾಜಿ ಸಿಎಂ ಬಂಗಾರಪ್ಪ ಅವಧಿಯಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷ, ವೀರಪ್ಪಮೋಯ್ಲಿ ಅವಧಿಯಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷ, ಎಸ್.ಎಂ.ಕೃಷ್ಣಾ ಅವಧಿಯಲ್ಲಿ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಧರಂ ಸಿಂಗ್ ಅವಧಿಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಎಸ್.ಬೋಸರಾಜು ಸೇವೆ ಸಲ್ಲಿಸಿದ್ದಾರೆ.