ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡಗಳ (Schedule Tribes) ಮೀಸಲಾತಿ (Reservation) ಹೆಚ್ಚಳಕ್ಕೆ ಇಂದು ವಿಶೇಷ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಸಂಪುಟ ಶನಿವಾರ ಅನುಮೋದನೆ ನೀಡಿದೆ. ಮೀಸಲಾತಿ ಸಂಬಂಧ ಕಾನೂನಾತ್ಮಕ ವಿಚಾರಗಳ ಬಗ್ಗೆ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದೆ. ಇದನ್ನೂ ಓದಿ: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಘೋಷಣೆ
Advertisement
Advertisement
ಮೀಸಲಾತಿ ಹೆಚ್ಚಳ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸರ್ವ ಪಕ್ಷಗಳ ಸಭೆ ನಡೆದಿತ್ತು. ಸಭೆಯಲ್ಲಿ ಮೀಸಲಾತಿ ಸಂಬಂಧ ನ್ಯಾ.ನಾಗಮೋಹನ್ ದಾಸ್ (Justice Nagamohan Das) ನೀಡಿರುವ ವರದಿ ಯಥಾವತ್ತಾಗಿ ಜಾರಿಗೆ ತರಲು ಒಮ್ಮತದ ಅಭಿಪ್ರಾಯ ವ್ಯಕ್ತವಾಗಿತ್ತು. ಶನಿವಾರ ಕ್ಯಾಬಿನೆಟ್‌ನಲ್ಲಿ ವಿಷಯ ಮಂಡಿಸಿ ಅಧಿಕೃತ ಆದೇಶ ಹೊರಡಿಸುವುದಾಗಿ ಸಿಎಂ ಬೊಮ್ಮಾಯಿ ನಿನ್ನೆ ಘೋಷಣೆ ಮಾಡಿದ್ದರು. ಅದರಂತೆ ಇಂದು ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
Advertisement
Advertisement
ಸದ್ಯ ಪರಿಶಿಷ್ಟ ಜಾತಿಗೆ 15% ಮತ್ತು ಪರಿಶಿಷ್ಟ ಪಂಗಡಕ್ಕೆ 3% ಮೀಸಲಾತಿ ಇದೆ. ನ್ಯಾ.ನಾಗಮೋಹನ್ ದಾಸ್ ಸಮಿತಿ ಜನಸಂಖ್ಯೆ ಆಧಾರದಲ್ಲಿ ಎಸ್‌ಸಿ ಮೀಸಲಾತಿ 15% ನಿಂದ 17%ಗೆ ಹಾಗೂ ಎಸ್‌ಟಿ ಮೀಸಲಾತಿ 3% ನಿಂದ 7%ಗೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ – ಹಾಲಿ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?