Connect with us

Bengaluru City

ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

Published

on

ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೊನೆಗೂ ಸಿದ್ದರಾಮುಯ್ಯ ನೇತೃತ್ವದ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆದಿದ್ದು, ಈ ವೇಳೆ ಸಮಿತಿಯ ಸದಸ್ಯರ ಅಭಿಪ್ರಾಯದಂತೆ ಲಿಂಗಾಯಿತ ಮತ್ತು ವೀರಶೈವರಾಗಿದ್ದು ಬಸವ ತತ್ವವವನ್ನು ಅನುಸರಿಸುತ್ತಿರುವ ಮಂದಿಗೆ ಪ್ರತ್ಯೇಕ ಧರ್ಮದ ಕುರಿತು ಕೇಂದ್ರ ಸರ್ಕಾರಕ್ಕೆ ಶೀಘ್ರವೇ ಶಿಫಾರಸ್ಸು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಇಂದು ಐತಿಹಾಸಿಕ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಮಿತಿ ನೀಡಿದ್ದ ವರದಿ ಬಗ್ಗೆ ಚರ್ಚೆ ಆಗಿದೆ. ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ನ್ಯಾ. ನಾಗಮೋಹನ ದಾಸ್ ಸಮಿತಿ ವರದಿಯನ್ವಯ ಪ್ರತ್ಯೇಕ ವೀರಶೈವ ಲಿಂಗಾಯಿತ ಸ್ವತಂತ್ರ ಧರ್ಮದ ಮಾನ್ಯತೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಅಂದ್ರು.

ಇದೀಗ ಸರ್ಕಾರ ಎಲೆಕ್ಷನ್ ಹೊತ್ತಲ್ಲಿ ಲಿಂಗಾಯತರು- ವೀರಶೈವರನ್ನು ಓಲೈಸಲು ಯತ್ನ ಮಾಡುತ್ತಿದ್ದೆಯಾ ಎಂಬ ಪ್ರಶ್ನೆ ಎದ್ದಿದೆ. ಶತಶತಮಾನಗಳಿಂದ ಹಿಂದೂ ಧರ್ಮದ ಭಾಗವಾಗಿದ್ದ ವೀರಶೈವ-ಲಿಂಗಾಯತರನ್ನು ಇದೀಗ ಸರ್ಕಾರ `ಅಲ್ಪಸಂಖ್ಯಾತರು’ ಎಂದು ಪರಿಗಣಿಸಲು ಮುಂದಾಗಿರುವುದು ಬಹುಸಂಖ್ಯಾತ ಹಿಂದೂ ಧರ್ಮೀಯರ ಆಕ್ರೋಶಕ್ಕೆ ತುತ್ತಾಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ.