ಬೆಂಗಳೂರು: ಬಿಜೆಪಿ (BJP) ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ (Anti Conversion Act) ರದ್ದಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ (H.K.Patil) ತಿಳಿಸಿದರು.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಧಾರ್ಮಿಕ ಸಂರಕ್ಷಣಾ ಅಧಿನಿಯಮ- 2022 ನ್ನು ರದ್ದುಗೊಳಿಸಿ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ವಿಧೇಯಕ- 2023ಕ್ಕೆ ಅನುಮೋದನೆ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹೆಡ್ಗೆವಾರ್, ಸೂಲಿಬೆಲೆ, ಸಾವರ್ಕರ್ ಪಾಠಗಳಿಗೆ ಕೊಕ್ – ಪಠ್ಯ ಪರಿಷ್ಕರಣೆಗೆ ಕಾಂಗ್ರೆಸ್ ಸಂಪುಟ ಅಸ್ತು
Advertisement
Advertisement
2022 ರಲ್ಲಿ ಬಿಜೆಪಿ ಸರ್ಕಾರ ಮಾಡಿದ್ದ ತಿದ್ದುಪಡಿಯನ್ನು ರದ್ದು ಮಾಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ತೆಗೆದುಕೊಂಡಿದ್ದೇವೆ. ಜುಲೈ ಅಧಿವೇಶನದಲ್ಲಿ ಹೊಸ ತಿದ್ದುಪಡಿಯೊಂದಿಗೆ ಮರು ಮಂಡನೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
Advertisement
ರಾಜ್ಯದಲ್ಲಿ ಮತಾಂತರ ತಡೆಯುವ ಉದ್ದೇಶದಿಂದ ಬಿಜೆಪಿ ನೇತೃತ್ವದ ಸರ್ಕಾರ ಕಾಯ್ದೆಯೊಂದನ್ನು ಜಾರಿಗೆ ತಂದಿತ್ತು. 2021ರ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿತ್ತು. ನಂತರ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೊಳಿಸಿತ್ತು. ಇದನ್ನೂ ಓದಿ: ಇನ್ಮುಂದೆ ಮಹದೇವಪ್ಪನೂ ಕನ್ವರ್ಟ್, ಕಾಕಪಾಟೀಲನೂ ಕನ್ವರ್ಟ್- ಯತ್ನಾಳ್ ಹೀಗಂದಿದ್ಯಾಕೆ..?
Advertisement
ಕಾಯ್ದೆಯಲ್ಲಿ ಏನಿತ್ತು?
* ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧು
* ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ.
* ಅಮಿಷ ಒಡ್ಡಿ ಮತಾಂತರಗೊAಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು
* ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‌ಜಿಓಗಳು ಪಾಲ್ಗೊಳ್ಳುವಂತಿಲ್ಲ.
* ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಸ್ಥಗಿತ
* ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.
* ಮತಾಂತರಗೊಂಡ ಎಸ್ಸಿ, ಎಸ್ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ, ಇತರೆ ಸೌಲಭ್ಯ ರದ್ದು
ದಂಡ ಮತ್ತು ಶಿಕ್ಷೆ
* ಎಸ್ಸಿ, ಎಸ್ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವಂತಿಲ್ಲ
* ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು.
* ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ.
* ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3 ರಿಂದ 5 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ.
* ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ.
* ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ
* ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ
* ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.