ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ (Congress) ಸರ್ಕಾರಕ್ಕೆ ಬಂದು ಮೇ 20ಕ್ಕೆ 3 ವರ್ಷ ಪೂರ್ಣಗೊಳ್ಳಲಿದೆ. ಅದಕ್ಕೂ 4 ದಿನ ಮೊದಲೇ ಸಿದ್ದರಾಮಯ್ಯ ಅವರ ಹಲವು ದಾಖಲೆಗಳ ಸಾಲಿನಲ್ಲಿ ಮತ್ತೊಂದು ಸಾಧನೆ ಸೇರಿಕೊಂಡಿದೆ. ರಾಜ್ಯದ ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ಸಿಎಂ ಆಗಿ ಅವರು ಹೊರಹೊಮ್ಮಿದ್ದಾರೆ.
ಮೈಸೂರು ತಾಲೂಕು ಬೋರ್ಡ್ ಚುನಾವಣೆಗೆ ಸ್ಪರ್ಧಿಸುವ ಮೂಲಕ 1977ರಲ್ಲಿ ಸಾರ್ವಜನಿಕ ಸೇವೆಗೆ ಪಾದಾರ್ಪಣೆ ಮಾಡಿದ್ದ ಸಿದ್ದರಾಮಯ್ಯ ತಮ್ಮ ರಾಜಕೀಯ ಬದುಕಿನ 50ನೇ ವರ್ಷಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಕಾಲಿರಿಸಲಿದ್ದಾರೆ. ಇದೇ ವೇಳೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಯಲ್ಲಿ 8 ವರ್ಷಗಳನ್ನು ಪೂರೈಸಿದ್ದಾರೆ. ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ 8 ವರ್ಷ ಮುಖ್ಯಮಂತ್ರಿಯಾಗಿರುವುದು ಸಿದ್ದರಾಮಯ್ಯ ಅವರ ಸಾಧನೆಗಳ ಪಟ್ಟಿಯಲ್ಲೇ ಅಗ್ರ ಸ್ಥಾನ ಪಡೆದಿದೆ. ಇದನ್ನೂ ಓದಿ: ನೀಟ್ ಪ್ರಶ್ನೆಪತ್ರಿಕೆ ಅಕ್ರಮದಲ್ಲಿ ಆರ್‌ಎಸ್‌ಎಸ್, ಬಿಜೆಪಿ ಕೈವಾಡವಿದೆ: ಪ್ರಿಯಾಂಕ್ ಖರ್ಗೆ
2013 ರಿಂದ 2018 ರವರೆಗೆ ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸಂಪೂರ್ಣ 5 ವರ್ಷಗಳ ಕಾಲ ಆಡಳಿತ ನಡೆಸುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. ದ್ವಿತೀಯ ಅವಧಿ (3 ವರ್ಷಗಳು) ಮೇ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಸ್ತುತ ಮೇ 2026 ರ ವೇಳೆಗೆ ಅವರು ತಮ್ಮ ಈ ಅವಧಿಯಲ್ಲಿ 3 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಇದನ್ನೂ ಓದಿ: ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು ಬಿಜೆಪಿಯವರದ್ದು ಒಂದು ದಿನದ ನಾಟಕ ಅಷ್ಟೇ; ಪ್ರಿಯಾಂಕ್ ಖರ್ಗೆ

