ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಜಾರಿ: ಸಿದ್ದರಾಮಯ್ಯ

Public TV
1 Min Read
SIDDARAMAIAH

– ಜಾತಿ, ಧರ್ಮ, ಭಾಷೆ ಯಾವುದೂ ಇಲ್ಲದೇ ಎಲ್ಲರಿಗೂ ಗ್ಯಾರಂಟಿ ಕೊಡ್ತೀವಿ ಎಂದ ಸಿಎಂ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಯನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ. ಜಾತಿ, ಧರ್ಮ, ಭಾಷೆ ಯಾವುದೂ ಇಲ್ಲದೇ ಎಲ್ಲರಿಗೂ ಗ್ಯಾರಂಟಿ ಕೊಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜನತೆಗೆ ಗ್ಯಾರಂಟಿ ಜಾರಿ ಮಾಡ್ತೀವಿ. ಎಲ್ಲ ಜಾತಿ, ಧರ್ಮ, ಭಾಷಿಕರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಭಿಕ್ಷಾಟನೆಯ ಕೂಪಕ್ಕೆ ತಳ್ಳುತ್ತಿದೆ: ನಾರಾಯಣಸ್ವಾಮಿ

ನಾವು ಚುನಾವಣೆ ಸಮಯದಲ್ಲಿ ಮತ್ತು ಅದಕ್ಕಿಂತ ಮುಂಚೆ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ವಿ. 5 ಗ್ಯಾರಂಟಿ ಘೋಷಣೆ ಮಾಡಿ ನಾನು ಮತ್ತು ಅಧ್ಯಕ್ಷರು ಗ್ಯಾರಂಟಿ ಕಾರ್ಡ್‌ಗೆ ಸಹಿ ಹಾಕಿದ್ವಿ. ಗ್ಯಾರಂಟಿಯಾಗಿ ಗ್ಯಾರಂಟಿ ಜಾರಿ ಮಾಡ್ತೀವಿ ಅಂತ ಮಾತು ಕೊಟ್ಟಿದ್ದೆವು. ಕಾರ್ಯಕರ್ತರ ಮೂಲಕ ಎಲ್ಲ ಮನೆಗೆ ಕಾರ್ಡ್‌ ಕೊಟ್ಟಿದ್ವಿ. ವಿರೋಧ ಪಕ್ಷದವರು ಹಲವು ಟೀಕೆ ಮಾಡಿದ್ದಾರೆ. ಸರ್ಕಾರ ರಚನೆ ಆದ ಮೇಲೆ ಪ್ರಮಾಣ ಸ್ವೀಕಾರ ಮಾಡಿದ ಬಳಿಕ ಅವತ್ತೇ ತಾತ್ವಿಕ ಒಪ್ಪಿಗೆ ಕೊಟ್ಟಿದ್ವಿ. ಅಂದೇ 5 ಗ್ಯಾರಂಟಿ ಜಾರಿ ಮಾಡ್ತೀವಿ ಅಂತ ಹೇಳಿದ್ವಿ. ಈಗ ಸುದೀರ್ಘವಾಗಿ ಗ್ಯಾರಂಟಿ ಬಗ್ಗೆ ಚರ್ಚೆ ಆಗಿದೆ. 5 ಗ್ಯಾರಂಟಿಯನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.

Share This Article