ಗಾಂಧಿನಗರ (ಗುಜರಾತ್): ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದರು.
ಗಾಂಧಿನಗರದ ರಾಜಭವನದಲ್ಲಿ ನೂತನ ಸಿಎಂ ಪಟೇಲ್ ಅವರನ್ನು ಇಂದು ಮಧ್ಯಾಹ್ನ ಭೇಟಿ ಮಾಡಿದರು. ವಿಶೇಷ ವಿಮಾನದ ಮೂಲಕ ಗಾಂಧಿನಗರಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವಂತೆ ಶುಭ ಕೋರಿದರು. ಇದನ್ನೂ ಓದಿ: ಗುಜರಾತ್ನ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ
Advertisement
Congratulated Shri @Bhupendrapbjp on being sworn in as the Chief Minister of Gujarat. May you be able to take this prosperous state on the path of greater development@CMOGuj pic.twitter.com/PeczjdrfL6
— Basavaraj S Bommai (@BSBommai) September 13, 2021
Advertisement
ಬೆಂಗಳೂರಿನಿಂದ ಮುಖ್ಯಮಂತ್ರಿಗಳೊಂದಿಗೆ ತೆರಳಿದ್ದ ಸಚಿವರಾದ ಆರ್. ಅಶೋಕ್, ಮುರುಗೇಶ್ ನಿರಾಣಿ, ಡಾ. ಕೆ ಸುಧಾಕರ್ ಅವರೂ ಕೂಡ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಶುಭಾಶಯ ಕೋರಿದ್ದಾರೆ.
Advertisement
ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಅಚಿವ ಅಮಿತ್ ಷಾ, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರನ್ನು ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದರು. ಇದನ್ನೂ ಓದಿ: ಭೂಪೇಂದ್ರ ಪಟೇಲ್ ಯಾರು? ಹಿನ್ನೆಲೆ ಏನು?