ಬೆಂಗಳೂರು: ಮುಡಾ (MUDA) ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರಿಗೆ ಮುಂಬಡ್ತಿ ನೀಡಿರುವ ಬಗ್ಗೆ ಮುಖ್ಯಕಾರ್ಯದರ್ಶಿ (CS Shalini Rajneesh) ಸ್ಪಷ್ಟೀಕರಣ ನೀಡಿದ್ದಾರೆ. ಸ್ನೇಹಮಯಿ ಕೃಷ್ಣ (Snehamayi Krishna) ಅವರ ಆರೋಪ ಆಧಾರವಿಲ್ಲದ ಸುಳ್ಳು ಮತ್ತು ಕ್ಷುಲ್ಲಕ ಆರೋಪಗಳಾಗಿವೆ. ಆಧಾರರಹಿತ ಆರೋಪಗಳಿಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪತ್ರದ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟೀಕರಣ ಕೊಟ್ಟು, ಎಚ್ಚರಿಕೆ ನೀಡಿದ್ದಾರೆ. ತಾವು ಸಲ್ಲಿಸಿರುವ ದೂರಿನಲ್ಲಿ ಮಾಡಿರುವ ಆರೋಪಗಳು ನಿರಾಧಾರವಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ ಬಡ್ತಿಗೆ ಕೋಟ್ಯಂತರ ರೂ. ಹಣ ಪಡೆದಿರೋ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅವರಿಗೆ ಸಿಎಸ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮುಡಾ ದೂರುದಾರ ಸ್ನೇಹಮಯಿ ಕೃಷ್ಣಗೆ ಆಮಿಷ?- ಮಾಜಿ ಆಯುಕ್ತ ವಿರುದ್ಧ ಗಂಭೀರ ಆರೋಪ
ದೂರುದಾರರ ಸದರಿ ಆರೋಪಕ್ಕೆ ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಪೂರಕ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಆರೋಪ ಸಂಬಂಧ ಸೂಕ್ತ ದಾಖಲೆ ಒದಗಿಸಿದ್ರೆ ನಿಯಮಾನುಸಾರ ಸಾಕ್ಷಾಧಾರಗಳನ್ನು ಖಂಡಿತವಾಗಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಅಷ್ಟೇ ಅಲ್ಲ ದೂರುದಾರರು ಯಾವುದೇ ಪೂರಕ ಸಾಕ್ಷ್ಯಾಧಾರಗಳನ್ನು ಒದಗಿಸದೇ ಆರೋಪ ಮಾಡಿದ್ದಾರೆ. ಸರ್ಕಾರದ ಉನ್ನತ ಹಂತದಲ್ಲಿರುವವರ ವಿರುದ್ಧ ನಿರಾಧಾರ ಆರೋಪ ಮಾಡುತ್ತಿದ್ದಾರೆ.
ಇದು ಅಧಿಕಾರಗಳ ವಿರುದ್ಧ ಮಾನಹಾನಿ ಮಾಡಿದಂತಾಗುತ್ತದೆ. ಆಧಾರರಹಿತ ಆರೋಪಗಳಿಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನಿಯಾಮನುಸಾರವಾಗಿಯೇ ಕೆಎಎಸ್ ಅಧಿಕಾರಿ, ಮುಡಾ ಮಾಜಿ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿಎಂ & ಕುಟುಂಬಸ್ಥರೇ ಸಂತ್ರಸ್ತರು – ನಟೇಶ್ ಪ್ರಮುಖ ಆರೋಪಿ ಎಂದ ʻಲೋಕಾʼ

