ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಭೇಟಿಯಾಗಿ ಕೊರೊನಾ ನಿರ್ವಹಣೆ ಬಗ್ಗೆ ಚರ್ಚೆ ಮಾಡಿದ್ದೇನೆ. ಕೊರೊನಾ ನಿರ್ವಹಣೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ವ್ಯಾಕ್ಸಿನೇಷನ್ ಹೆಚ್ಚು ಮಾಡಲು ಸೂಚಿಸಿದ್ದಾರೆ. ಬೂಸ್ಟರ್ ಡೋಸ್ ಬಗ್ಗೆ ಕೇಂದ್ರದ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವರ ಭೇಟಿ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Advertisement
ಕೇಂದ್ರ ನಾಯಕ ಭೇಟಿ ಬಳಿಕ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಇಬ್ಬರು ಕರ್ನಾಟಕದವರು ಎಂದಿದ್ದಾರೆ. ಹೊಸ ತಳಿಗಳ ಬಗ್ಗೆ, ತಡೆಗಟ್ಟುವ ಬಗ್ಗೆ ನಾಳೆ ತುರ್ತುಸಭೆ ಕರೆಯಲಾಗಿದೆ. ನಾಳೆ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದೆ. ಕೇಂದ್ರದ ಪ್ರಮುಖರು, ತಜ್ಞರ ಜೊತೆ ಚರ್ಚೆ ಮಾಡಬೇಕಿದೆ. ವರದಿ ಬಂದ ಬಳಿಕವೂ ಮತ್ತೆ ಕೇಂದ್ರ ಆರೋಗ್ಯ ಸಚಿವರು ಭೇಟಿ ಮಾಡಿ ಮಾಹಿತಿಗಳನ್ನು ನಾಳೆ ಶೇರ್ ಮಾಡುವುದಾಗಿ ಹೇಳಿದ್ದಾರೆ. ಈಗ ಕೇವಲ ಮಾಹಿತಿ ರವಾನೆ ಆಗಿದೆ. ಪೂರ್ಣ ವರದಿ ಬಂದ ಬಳಿಕ ಎಲ್ಲಾ ವಿಚಾರ ಲಭ್ಯವಾಗಲಿದೆ. ವಿಮಾನ ನಿಲ್ದಾಣ ಪರೀಕ್ಷೆ, ಕ್ವಾರಂಟೈನ್ ಬಗ್ಗೆ ಹೆಚ್ಚು ತಿಳಿಯುವ ಅವಶ್ಯಕತೆ ಇದೆ ನಾಳೆ ತಜ್ಞರ ಜೊತೆ ಮಾತನಾಡಿ ತೀರ್ಮಾನ ಮಾಡಲಾಗುತ್ತೆ ಎಂದರು. ಇದನ್ನೂ ಓದಿ: ಭಾರತಕ್ಕೆ ಕಂಟಕವಾಗುವುದೇ ಓಮಿಕ್ರಾನ್ – ಹೈರಿಸ್ಕ್ ದೇಶಗಳಿಂದ 7,976 ಮಂದಿ ಆಗಮನ?
Advertisement
Advertisement
ರಸಗೊಬ್ಬರದ ಸರಬರಾಜು ಬಗ್ಗೆ ಚರ್ಚೆ ಮಾಡಿದ್ದೇನೆ. ಡಿಎಪಿ ಹೆಚ್ಚುವರಿಗೆ ಮನವಿ ಮಾಡಲಾಗಿತ್ತು. ಸಚಿವರು ಗೊಬ್ಬರ ನೀಡುವ ಭರವಸೆ ನೀಡಿದ್ದಾರೆ. ಬಳಿಕ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ ಜನವರಿ ತಿಂಗಳಲ್ಲಿ ರಾಜ್ಯಕ್ಕೆ ಬರಲು ಆಹ್ವಾನ ನೀಡಿದ್ದೇನೆ. ಕೋರ್ಟ್ ಮತ್ತು ಕಾನೂನು ವ್ಯವಸ್ಥೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ಕರ್ನಾಟಕಕ್ಕೆ ಕಾಲಿಟ್ಟ ಡೆಡ್ಲಿ ವೈರಸ್- ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ!
Advertisement
ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಬೇರೆ ಬೇರೆ ಅಭಿಪ್ರಾಯಗಳಿದೆ. ಯಡಿಯೂರಪ್ಪ ಅವರು ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನುಡಿದರು.
Thank you for those kind words @KirenRijiju ji. It has been a truly enriching and insightful meeting. https://t.co/lHZSpxVWyn
— Basavaraj S Bommai (@BSBommai) December 2, 2021
ಸಂಸತ್ ಭವನದಲ್ಲಿ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರಾದ, ಪ್ರಹ್ಲಾದ್ ಜೋಶಿ, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಕಿರಣ್ ರಿಜಿಜು ಮತ್ತು ಮನ್ಸೂಕ್ ಮಾಂಡವಿಯಾ ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.