ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಬೆನ್ನಲ್ಲೆ ದೀಗ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೂ ಕೋವಿಡ್-19 ದೃಢಪಟ್ಟಿದೆ.
Advertisement
ಈ ಕುರಿತಂತೆ ಭರತ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನ್‍ನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್
Advertisement
Hello everyone,
I have tested positive for covid with very mild symptoms. I have isolated myself at home. I would like the people who have come in contact with me to kindly get themselves tested.
Stay home stay safe. #COVID19 #MaskUpIndia
— Bharath Bommai (@BommaiBharath) January 11, 2022
Advertisement
ಸೋಮವಾರ ಬಸವರಾಜ ಬೊಮ್ಮಾಯಿ ಅವರು ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿರುವಂತೆ ತಿಳಿಸಿದ್ದರು. ಇದನ್ನೂ ಓದಿ: ಕೊರೊನಾ ಅಂಟಿಸಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದ್ದೀರಾ, ನಿಮ್ಗೆ ಒಳ್ಳೆಯದಾಗಲ್ಲ: ಡಿಕೆಶಿ ಕಣ್ಣೀರು
Advertisement
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19
— Basavaraj S Bommai (@BSBommai) January 10, 2022
ಬೊಮ್ಮಾಯಿ ಅವರು ಸೋಮವಾರ ಬೂಸ್ಟರ್ ಡೋಸ್ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲದೇ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ಅವರ ಅಂತ್ಯಕ್ರಿಯೆಯಲ್ಲೂ ಭಾಗಿಯಾಗಿದ್ದರು. ಆರೋಗ್ಯ ಸಚಿವ ಸುಧಾಕರ್, ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಸಿಎಂ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ. ಅಷ್ಟೇ ಅಲ್ಲದೇ ಆಡಳಿತ ಸುಧಾರಣಾ ಸಂಬಂಧ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದ್ದರು.