ನಾಳೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ – ಕೇಂದ್ರ ಸಚಿವರ ಭೇಟಿ ಸಾಧ್ಯತೆ

Advertisements

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದು, ಕೆಲ ಕೇಂದ್ರ ಸಚಿವರ ಭೇಟಿ ಮಾಡಲಿದ್ದಾರೆ.

Advertisements

ರಾಜ್ಯದ ಕುರಿತಾಗಿ ಕೆಲ ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದ್ದು, ನಾಳೆ ನಡೆಯಲಿರುವ ಜಿಎಸ್‍ಟಿ ಸಭೆಯಲ್ಲಿ ವರ್ಚುವಲ್ ಮೂಲಕ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ

Advertisements

ಆಜಾದಿ ಕಾ ಅಮೃತ್ ಮಹೋತ್ಸವ ಹಾಗೂ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ವೇಳೆ ಬಿಜೆಪಿ ರೋಡ್ ಶೋ ಮತ್ತು ಬೃಹತ್ ಸಮಾವೇಶಕ್ಕೆ ಪ್ಲಾನ್ ಮಾಡಿಕೊಳ್ಳುತ್ತಿದೆ. ಈ ಬಗ್ಗೆಯೂ ಮಾತುಕತೆ ನಡೆಸುವ ಸಾಧ್ಯತೆ ಇದೆ. ಬೊಮ್ಮಾಯಿ ನಾಳೆ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಮಾಡಲಿದ್ದು, ಸಂಜೆ 7.15ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

Live Tv

Advertisements

Advertisements
Exit mobile version