ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿದೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19
— Basavaraj S Bommai (@BSBommai) January 10, 2022
Advertisement
ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿ ಎಂದು ಸಿಎಂ ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಕೊರೊನಾ
Advertisement
Advertisement
ಸಿಎಂ ಅವರು ಇಂದು ಬೂಸ್ಟರ್ ಡೋಸ್ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲದೇ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ಅವರ ಅಂತ್ಯಕ್ರಿಯೆಯಲ್ಲೂ ಭಾಗಿಯಾಗಿದ್ದರು. ಆರೋಗ್ಯ ಸಚಿವ ಸುಧಾಕರ್, ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ. ಅಷ್ಟೇ ಅಲ್ಲದೇ ಆಡಳಿತ ಸುಧಾರಣಾ ಸಂಬಂಧ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದ್ದರು.
Advertisement
ಈಚೆಗಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮೂರು ದಿನಗಳ ಹಿಂದಷ್ಟೇ ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇದರ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಸೋಂಕು ದೃಢಪಟ್ಟಿದೆ. ಇದನ್ನೂ ಓದಿ: ಸಚಿವ ಆರ್. ಅಶೋಕ್‍ಗೆ ಕೊರೊನಾ ಪಾಸಿಟಿವ್