ಬೆಂಗಳೂರು: ಸುಪ್ರೀಂ ಕೋರ್ಟ್‍ನಲ್ಲಿ (Supreme Court) ಗಡಿ ವಿವಾದ (Border Row) ಹಿನ್ನೆಲೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೈಕಮಾಂಡ್ (High Command) ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ (Cabinet Expansion) ಬಗ್ಗೆ ಮಾತನಾಡಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ.
Advertisement
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (J.P Nadda) ಹಾಗೂ ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಕೆಲವು ಪ್ರಮುಖ ಸಚಿವರನ್ನು ಭೇಟಿ ಮಾಡಲು ಸಿಎಂ ಭೇಟಿಗೆ ಪ್ರಯತ್ನಿಸಲಿದ್ದು, ಭೇಟಿಗೆ ಸಮಯ ಸಿಕ್ಕಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ವಿಧಾನಸಭೆ ಚುನಾವಣೆಗೆ ಬಗ್ಗೆ ಚರ್ಚೆ ನಡೆಸಲಿದ್ದು ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಅವರು ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಎಷ್ಟು ಜನ ರೌಡಿಶೀಟರ್‌ಗಳಿದ್ದಾರೆ ಅಂತ ಮೊದಲು ಲೆಕ್ಕ ಹಾಕಲಿ: ಸಿಎಂ
Advertisement
Advertisement
2023ರ ವಿಧಾನಸಭಾ ಚುನಾವಣೆಗೆ ನಾಲ್ಕರಿಂದ ಐದು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಖಾಲಿ ಉಳಿದಿರುವ ಸ್ಥಾನವನ್ನು ಭರ್ತಿ ಮಾಡುವಂತೆ ಹಾಗೂ ಇದರಿಂದಾಗುವ ರಾಜಕೀಯ ಲಾಭಗಳ ಬಗ್ಗೆಯೂ ಅವರು ಮನವರಿಕೆ ಮಾಡಬಹುದು ಎನ್ನಲಾಗಿದೆ. ಮತ್ತೆ ಸಂಪುಟ ಸೇರಲು ಕೆ.ಎಸ್ ಈಶ್ವರಪ್ಪ, ರಮೇಶ್ ಜಾರಕಿಹೋಳಿ, ಬಸನಗೌಡ ಪಾಟೀಲ್ ಯತ್ನಾಳ್, ಸಿ.ಪಿ ಯೋಗಿಶ್ವರ್ ಸೇರಿ ಹಲವು ನಾಯಕರು ಪ್ರಯತ್ನಿಸುತ್ತಿದ್ದಾರೆ. ಆದರೆ ವಿಧಾನಸಭೆ ಚುನಾವಣೆ ಹಿನ್ನೆಲೆ ಹೈಕಮಾಂಡ್ ನಾಯಕರು ಸಮಯ ನೀಡ್ತಾರ ಇಲ್ವ ಅನ್ನೊದು ಸದ್ಯದ ಕುತೂಹಲವಾಗಿದೆ. ಇದನ್ನೂ ಓದಿ: ನಾಳೆ ಸುಪ್ರೀಂ ಕೋರ್ಟ್‍ನಲ್ಲಿ ಗಡಿ ವಿವಾದ ಅರ್ಜಿ ವಿಚಾರಣೆ – ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಪೊಲೀಸರಿಂದ ಹೈಅಲರ್ಟ್