ನವದೆಹಲಿ: ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ದೆಹಲಿಗೆ ತಲುಪಿದ್ದು, ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ (High Command) ಪ್ರಮುಖ ನಾಯಕರನ್ನು ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ಡಿಕೆಶಿ ಅವರ ಈ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಹೈಕಮಾಂಡ್ ನಾಯಕರ ಜೊತೆಗಿನ ಸಭೆಯಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಅವರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನ, ಸಂಪುಟದಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ಕಲ್ಪಿಸುವ ವಿಚಾರ ಹಾಗೂ ಕೆಪಿಎಸ್‌ಸಿ ಅಕ್ರಮ ಆರೋಪ ಸೇರಿದಂತೆ ರಾಜ್ಯದ ಪ್ರಮುಖ ವಿದ್ಯಮಾನಗಳ ಕುರಿತು ವಿಸ್ತೃತ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: ಸೆ.1 ರಿಂದ ನಮ್ಮ ಪಾದಯಾತ್ರೆ ಲಿಂಗಸುಗೂರಿನಿಂದ ಪ್ರಾರಂಭವಾಗಲಿದೆ: ಬಿವೈವಿ
ತಡರಾತ್ರಿ ಹೈಕಮಾಂಡ್ ವರಿಷ್ಠರೊಂದಿಗೆ ಸಮಾಲೋಚನೆ ಮುಗಿಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಬೆಳಗ್ಗೆಯೇ ದೆಹಲಿಯಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.
