ನವದೆಹಲಿ: ದೆಹಲಿಯಲ್ಲಿ (Delhi) ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದಲ್ಲಿ ನಡೆಯುತ್ತಿದ್ದ ನೀತಿ ಆಯೋಗದ ಸಭೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಗೈರಾಗಿದ್ದು, ಇಂತಹ ಮಹತ್ವದ ಸಭೆಗೆ ಬರದಿರಲು ಕಾರಣವೇನು ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.
ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತಕ್ಕಾಗಿ ವಿಕಸಿತ ರಾಜ್ಯ ಹೆಸರಿನಲ್ಲಿ (Viksit Rajya for Viksit Bharat 2047) ಹತ್ತನೇ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ, ಮೂಲಸೌಕರ್ಯ ಅಭಿವೃದ್ಧಿ, ಮತ್ತು ಸುಸ್ಥಿರತೆಯಂತಹ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ.ಇದನ್ನೂ ಓದಿ: ಪ್ರೀತಿಸಿದವನೊಂದಿಗೆ ಮನೆಬಿಟ್ಟು ಹೋದ ಮಗಳು – ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶಂಕೆ
ಜೊತೆಗೆ ರಾಷ್ಟ್ರೀಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಸ್ಥಳೀಯ ಅಗತ್ಯತೆಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಲು ಈ ಸಭೆ ವೇದಿಕೆಯಾಗಿದ್ದು, ಸಾಮಾನ್ಯವಾಗಿ ಎಲ್ಲಾ ಸಿಎಂಗಳು ರಾಜ್ಯದ ಅಭಿವೃದ್ಧಿ ವಿಚಾರಗಳಲ್ಲಿ ತಮ್ಮ ವಾದವನ್ನು ಪ್ರಧಾನಿ ಮುಂದೆ ಮಂಡಿಸುತ್ತಾರೆ.
Prime Minister, Shri Narendra Modi chairs the 10th Governing Council Meeting of NITI Aayog at Bharat Mandapam in New Delhi today on the theme, Viksit Rajya for Viksit Bharat@2047.
The meeting provides a platform for the Centre and States/UTs to deliberate on measures to advance… pic.twitter.com/5uZ2ecZxar
— NITI Aayog (@NITIAayog) May 24, 2025
ಈ ಸಭೆಗೆ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸಿದ್ದರು. ಈ ಪೈಕಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಸಿಎಂ ಸುಖವಿಂದ್ರ ಸಿಂಗ್ ಸುಖು, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಸೇರಿ ಹಲವು ಇತರೆ ಪಕ್ಷಗಳ ಸಿಎಂಗಳು ಭಾಗಿಯಾಗಿದ್ದರು. ಆದ್ರೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು.ಇದನ್ನೂ ಓದಿ: `ಯುವನಿಧಿ’ ಗ್ಯಾರಂಟಿ ಹಣದಿಂದ ಲ್ಯಾಪ್‌ಟಾಪ್ ಖರೀದಿಸಿದ ವಿದ್ಯಾರ್ಥಿನಿ ಇಶಾ ಆಸಿಫ್