ಮೋದಿಯನ್ನು ಭೇಟಿಯಾಗಿ ರಾಜ್ಯದ ಯೋಜನೆಗಳಿಗೆ ಅನುದಾನ ಕೋರಿದ ಡಿಕೆಶಿ: ಏನೇನು ಮನವಿ ಮಾಡಲಾಗಿದೆ?

Public TV
2 Min Read
Karnataka CM Siddaramaiah and DCM DK Shivakumar meets PM Modi seeks clearances for projects

ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಮತ್ತು ಸಿಎಂ ಸಿದ್ದರಾಮಯ್ಯನವರು (CM Siddaramaiah) ಇಂದು ಕರ್ನಾಟಕದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ಮನವಿ ಮಾಡಿದರು.

ಈ ಭೇಟಿಯ ವೇಳೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ರಾಜ್ಯದ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಅನುದಾನ ನೀಡುವಂತೆ ಮನವಿ ಮಾಡಿದರು.

ಏನೇನು ಮನವಿ ಮಾಡಲಾಗಿದೆ?
ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ. 2023-24ರ ಸಾಲಿನಲ್ಲಿ 5600 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿತ್ತು. 2024 -25ರ ಸಾಲಿನಲ್ಲಿ 2,340 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ 58% ರಷ್ಟು ಕಡಿತವಾಗಿದೆ.Karnataka CM Siddaramaiah and DCM DK Shivakumar meets PM Modi seeks clearances for projects 1

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2023-24 ರ ಕೇಂದ್ರ ಬಜೆಟ್ ನಲ್ಲಿ ಅನುಮೋದನೆಯಾಗಿರುವ 5,300 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ ಈವರೆಗೆ ಈಡೇರಿಲ್ಲ. ತ್ವರಿತ ನೀರಾವರಿ ಲಾಭ ಕಾರ್ಯಕ್ರಮದಡಿ ನೆರವು ಒದಗಿಸಲು ಸಚಿವ ಸಂಪುಟದ ಟಿಪ್ಪಣಿಯನ್ನು ಸಿದ್ಧಮಾಡಿರುವ ಬಗ್ಗೆ ತಿಳಿದುಬಂದಿದೆ. ಪ್ರಸಕ್ತ ಯೋಜನೆ ಶೀಘ್ರ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಆದ್ದರಿಂದ ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಬೇಕು.

ಕಾವೇರಿ ನದಿ ಪಾತ್ರದ ಮೇಕೇದಾಟು ಯೋಜನೆ ಹಾಗೂ ಮಹದಾಯಿ ನದಿಯ ಕಳಸಾಬಂಡೂರಿ ಯೋಜನೆಗಳಗತ್ತ ತಾವು ತುರ್ತು ಗಮನ ಹರಿಸಬೇಕಿದೆ ಜಲಶಕ್ತಿ ಹಾಗೂ ಅರಣ್ಯ, ಪರಿಸರ ಸಚಿವಾಲಯಗಳಿಂದ ಶೀಘ್ರ ತೀರುವಳಿ ದೊರಕಿಸಿಕೊಡಲು ಕೋರಲಾಗಿದೆ.  ಇದನ್ನೂ ಓದಿ: ದೆಹಲಿಯಲ್ಲಿ ಮೋದಿ ಭೇಟಿಯಾದ ಸಿಎಂ – ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಬಿಡುಗಡೆಗೆ ಮನವಿ

Karnataka CM Siddaramaiah and DCM DK Shivakumar meets PM Modi seeks clearances for projects 2

15ನೇ ಹಣಕಾಸು ಆಯೋಗ ಕರ್ನಾಟಕ ರಾಜ್ಯಕ್ಕೆ ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂದು ನಾವು ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದ್ದೇವೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.1ರಷ್ಟು ಕಡಿಮೆ ಮಾಡಿರುವ ಶಿಫಾರಸ್ಸನ್ನು ಹಣಕಾಸು ಇಲಾಖೆ ಸರಿಪಡಿಸಬೇಕಾಗಿದೆ. ಹಣಕಾಸು ಆಯೋಗವು ರಾಜ್ಯಕ್ಕೆ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ 5495 ಕೋಟಿ ರೂ. ಅನುದಾನ ಬಿಡುಗಡೆಗೆ ಮತ್ತು ಪೆರಿಫೆರಲ್ ರಿಂಗ್ ರಸ್ತೆ ಮತ್ತು ನೀರಿನ ಮೂಲಗಳ ಪುನರುಜ್ಜೀವನಕ್ಕೆ 6ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡುವ ಬಗ್ಗೆ ಶಿಫಾರಸು ಮಾಡಿದೆ. ಕನಿಷ್ಟ ಪಕ್ಷ ಹಣಕಾಸು ಆಯೋಗ ಈ ಎರಡು ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಬೇಕಾಗಿದೆ. ನಾವು ಇನ್ನೂ 15ನೇ ಹಣಕಾಸು ಆಯೋಗದ ಅವಧಿಯಲ್ಲಿರುವುದರಿಂದ ರಾಜ್ಯಕ್ಕೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ.

 

Share This Article