ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮನ್ವಯ ಸಭೆಯ ಬಳಿಕ ನಿದ್ದೆ ತೂಕಡಿಸುತ್ತಿದ್ದ ಸಿಎಂ ಸಿದ್ದರಾಮಯ್ಯನವರನ್ನು ದಿನೇಶ್ ಗುಂಡೂರಾವ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಸಿದ ಘಟನೆ ನಡೆದಿದೆ.
ಒಂದೂವರೆ ಗಂಟೆಗಳ ಕಾಲ ನಡೆದ ಸಮನ್ವಯ ಸಮಿತಿ ಸಭೆಯ ಬಳಿಕ ಸಂಜೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿ ನಡೆಸಿದರು. ಈ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮೂವರು ಉಸ್ತುವಾರಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Advertisement
ಸುದ್ದಿಗೋಷ್ಠಿ ನಡೆಯುತ್ತಿದ್ದಾಗ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರಿದ್ದರು. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್, ‘ಪ್ಲೀಸ್ ಅಲರ್ಟ್ ಸಿಎಂ ಸರ್ ಸ್ಲೀಪಿ’ ಎಂದು ಬರೆದು ಚೀಟಿ ಕಳುಹಿಸಿದರು. ಕೂಡಲೇ ದಿನೇಶ್ ಗುಂಡೂರಾವ್ ಕನ್ನಡಕ ಕೊಟ್ಟು ಸಿದ್ದರಾಮಯ್ಯನವರನ್ನು ಎಚ್ಚರಿಸಿದರು.
Advertisement
ಸುದ್ದಿಗೋಷ್ಠಿ ಮುಗಿದ ಬಳಿಕ ಸಿಎಂ ಈ ಆ ಚೀಟಿಯನ್ನು ಹಾಗೆಯೇ ಬಿಟ್ಟು ಹೋಗಿದ್ದರು. ಮಾಧ್ಯಮದ ವ್ಯಕ್ತಿಗಳು ವೇದಿಕೆಯ ಮೇಲೆ ಹೋಗಿ ಆ ಚೀಟಿಯಲ್ಲಿ ಏನಿದೆ ಎಂದು ಕುತೂಹಲದಿಂದ ನೋಡಿದಾಗ, ‘ಪ್ಲೀಸ್ ಅಲರ್ಟ್ ಸಿಎಂ ಸರ್ ಸ್ಲೀಪಿ’ ಎಂಬುದಾಗಿ ಅದರಲ್ಲಿ ಬರೆಯಲಾಗಿತ್ತು.