ಬೆಂಗಳೂರು: ರಾಜ್ಯದಲ್ಲಿ ‘ಜೋಡೆತ್ತು’ ಸರ್ಕಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು ಇಂದು ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಜೊತೆ 8 ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮಧ್ಯರಾತ್ರಿ 2 ಗಂಟೆಯವರೆಗೂ ದೆಹಲಿಯಲ್ಲಿರುವ ಕೆಸಿ ವೇಣುಗೋಪಾಲ್ (K. C. Venugopal) ನಿವಾಸದಲ್ಲಿ ಸಭೆ ಮೇಲೆ ಸಭೆ ನಡೆದಿದೆ. ಪ್ರಮುಖ ಖಾತೆಗಳನ್ನು ತಮ್ಮ ಆಪ್ತ ಶಾಸಕರಿಗೆ ನೀಡುವಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಭುಜಂಗಶೆಟ್ಟಿ ಇನ್ನಿಲ್ಲ
Advertisement
Advertisement
ಸಚಿವ ಸ್ಥಾನ, ಖಾತೆ ವಿಚಾರವಾಗಿ ಒಮ್ಮತ ಮೂಡದ ಪರಿಣಾಮ ಕೇವಲ 8 ಮಂದಿ ಮಾತ್ರ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಂಗಾಮಿ ಸ್ಪೀಕರ್ ಆಗಿ ನೇಮಕವಾಗುವ ಸಾಧ್ಯತೆಯಿದೆ.
Advertisement
ಪ್ರಮಾಣವಚನ ಸ್ವೀಕರಿಸುವವರು ಯಾರು?
ಪರಮೇಶ್ವರ್, ಪ್ರಿಯಾಂಕ ಖರ್ಗೆ, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ.