DistrictsKarnatakaLatestLeading NewsMain Post

ಮೇ 10ರ ಒಳಗಡೆ ಸಿಎಂ ಬದಲಾವಣೆ: ಯತ್ನಾಳ್‌ ಬಾಂಬ್‌

ವಿಜಯಪುರ: ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಬಹುದು ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಾಂಬ್‌ ಸಿಡಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಮಿತ್‌ ಶಾ ಕರ್ನಾಟಕಕ್ಕೆ ಆಗಮಿಸಿದ್ದಾರೆ. ರಾಜ್ಯ ಹಾಗೂ ಪಾರ್ಟಿ ಹಿತದೃಷ್ಟಿಯಿಂದ ಪಕ್ಷ ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತದೆ. ನಿನ್ನೆ ದೆಹಲಿಯಲ್ಲಿ ಹೈ ಪವರ್‌ ಸಭೆ ನಡೆಸಲಾಗಿದೆ. ಅಂತಿಮ ತೀರ್ಮಾನವನ್ನು ಪ್ರಧಾನಿ ಮೋದಿ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಎಂ ಬದಲಾವಣೆಯಾದರೆ ಒಬ್ಬರಿಗೆ ಜೈಲಿಗೆ ಹೋಗುವ ಭಯ ಇದೆ. ಇನ್ನೊಬ್ಬರಿಗೆ ಸಿಎಂ ಆಗಲ್ಲ ಎನ್ನುವ ಭಯ ಇದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ವಿರುದ್ಧ ವ್ಯಂಗ್ಯವಾಡಿದರು. ಇದನ್ನೂ ಓದಿ: 2024 ಮೋದಿ ಒನ್ಸ್‌ಮೋರ್‌ – ಜರ್ಮನಿ ಭಾರತೀಯರಿಂದ ಘೋಷಣೆ

ಇಂದು ಸಿಎಂ ಶಾಸಕರಿಗೆ ಸಂಸದರಿಗೆ ಆಯೋಜಿಸಿದ ಔತಣಕೂಟದ ಬಗ್ಗೆ ಕೇಳಿದ ಪ್ರಶ್ನೆಗೆ, ನಿನ್ನೆ ನನಗೆ ಸಿಎಂ ಕಚೇರಿಯಿಂದ ಕರೆ ಮಾಡಿ ಆಹ್ವಾನಿಸಲಾಗಿದೆ. ಆದರೆ ಇಂದು ಬಸವ ಜಯಂತಿ ಇದೆ. ಈ ಪವಿತ್ರ ದಿನದಂದು ವಿಜಯಪುರದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೀಗಾಗಿ ನಾನು ಬೆಂಗಳೂರಿಗೆ ತೆರಳುತ್ತಿಲ್ಲ ಎಂದು ತಿಳಿಸಿದರು.

Leave a Reply

Your email address will not be published.

Back to top button