ಬೆಂಗಳೂರು: ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
Advertisement
ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್‍ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಬೇಕು, ಹಿಜಬ್ ಅಲ್ಲ : ಬಿಸ್ವಾ ಶರ್ಮಾ
Advertisement
Advertisement
ಪರಿಸ್ಥಿತಿಯನ್ನು ಅವಲೋಕಿಸಿ, ಕಾಲೇಜು ಪುನಾರಂಭದ ಬಗ್ಗೆ ಫೆ.16ರ ಹೊತ್ತಿಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ. ಹಿಜಬ್-ಕೇಸರಿ ಸಂಘರ್ಷ ಹೈಕೋರ್ಟ್‍ನಲ್ಲಿರುವಂತೆ ಇತ್ತ ಶಾಂತಿ ಸುವ್ಯವಸ್ಥೆ ಕಾಪಾಡಲು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಹಿಜಬ್ ವಿವಾದದ ಹಿಂದೆ ಇರುವುದು ಕಾಂಗ್ರೆಸ್ ಪಕ್ಷ ಎನ್ನುವುದಕ್ಕೆ ಈಗ ಇನ್ನೊಂದು ಸಾಕ್ಷ್ಯ ಲಭಿಸಿದೆ: ಬಿಜೆಪಿ
Advertisement