ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ಬಾಲರಾಮನ ಪ್ರಾಣಪ್ರತಿಷ್ಠಾಪನೆ ದಿನ ಹತ್ತಿರ ಬರುತ್ತಿದ್ದಂತೆ ರಾಮಮಂದಿರ (Ram Mandir) ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ ಪಾಲಿಟಿಕ್ಸ್ (Politics) ಜೋರಾಗಿದೆ. ನಾವು ರಾಮಭಕ್ತರು ಎನ್ನುವುದಕ್ಕೆ ಕಾಂಗ್ರೆಸ್ (Congress) ಸಮರ್ಥನೆ ನೀಡಲು ಆರಂಭಿಸಿದೆ.
ನಾವು ಕೂಡ ರಾಮಭಕ್ತರೇ ರಾಮಮಂದಿರಕ್ಕೆ ನಮ್ಮದೂ ಕೊಡುಗೆ ಇದೆ. ರಾಮಮಂದಿರ ಬಾಗಿಲು ತೆಗೆಸಿದ್ದೇ ನಾವು. ಪೂಜೆ ಮಾಡಲು ಅವಕಾಶ ಕೊಟ್ಟಿದ್ದೆ ನಾವು ಎಂದು ಹೇಳಿದೆ.
Advertisement
????ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ.
????ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು.
????ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ.…
— Karnataka Congress (@INCKarnataka) January 8, 2024
Advertisement
ಮಹಾತ್ಮ ಗಾಂಧೀಜಿಗಿಂತ (Mahatma Gandhi) ದೊಡ್ಡ ರಾಮಭಕ್ತ ಇದ್ದಾರಾ? ಜನವರಿ 22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ಕಾಂಗ್ರೆಸ್. ಹೀಗೆ ಕಾಂಗ್ರೆಸ್ ಕ್ರೆಡಿಟ್ ಕ್ಲೈಮ್ ವಾರ್ ಶುರು ಮಾಡಿಕೊಂಡಿದೆ. ಈ ಸಂಬಂಧ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್ ಹಾಕಿ ರಾಮ ಮಂದಿರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯ ಪಟ್ಟಿಯನ್ನು ವಿವರಿಸಿದೆ.
Advertisement
ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ ಎಂದು ಪರಮೇಶ್ವರ್ (Parameshwar) ಹೇಳಿದರೆ ಮುಚ್ಚಿಹೋಗಿದ್ದ ರಾಮಮಂದಿರದ ಗರ್ಭಗುಡಿ ತೆರೆಸಿದ್ದು ರಾಜೀವ್ ಗಾಂಧಿ ಎಂದು ಡಾ.ಎಂ.ಸಿ ಸುಧಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದ ಡಿಕೆಶಿಗೆ ದೋಸ್ತಿಗಳು ತಿರುಗೇಟು
Advertisement
ಪೋಸ್ಟ್‌ನಲ್ಲಿ ಏನಿದೆ?
ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ. ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ: ಪರಮೇಶ್ವರ್
1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ.
ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ಣು ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ಬಿಜೆಪಿಗೆ ಸನ್ಮತಿ ದೇ ಭಗವಾನ್ ಎಂದು ಹೇಳಬೇಕಾಗಿ ಬಂದಿರುವುದು ದುರಂತ.