ಬೆಂಗಳೂರು: ಧಾರ್ಮಿಕ ದತ್ತಿ (Muzrai Temples) ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ (Temple) ಮೊಬೈಲ್ ಫೋನ್ (Mobile Phone) ಬಳಕೆಗೆ ನಿಷೇಧ ಹೇರಲಾಗಿದೆ.
ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ (Karnataka Temple) ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿತ್ತು. ಈಗ ಅಧಿಕೃತವಾಗಿ ಮೊಬೈಲ್ ಫೋನ್ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ – ಯಾವ ದೇವಾಲಯದ ಆದಾಯ, ಖರ್ಚು ಎಷ್ಟು?
Advertisement
Advertisement
ಆದೇಶದಲ್ಲಿ ಏನಿದೆ?
ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ. ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.
Advertisement
Web Stories