Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ಇಲ್ಲ, ಕೊಲೆಗಡುಕ ರಾಜ್ಯ ಮಾಡಿದ್ದೇ ಸರ್ಕಾರದ ಸಾಧನೆ : ವಿಜಯೇಂದ್ರ ವಾಗ್ದಾಳಿ

Public TV
Last updated: May 20, 2024 4:56 pm
Public TV
Share
3 Min Read
BY vijayendra
SHARE

ಬೆಂಗಳೂರು: ಕಳೆದೊಂದು ವರ್ಷದ ಈ ರಾಜ್ಯ ಸರ್ಕಾರ (Karnataka Government) ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B. Y. Vijayendra) ಅವರು ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ ಎಂದು ಅವರು ಕಿಡಿಕಾರಿದರು.

ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ (Congress) ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರ್ಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು. ನುಡಿದಂತೆ ನಡೆಯುವ ಸರಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ. ಹೊಗಳುಭಟರು, ಜಾಹೀರಾತಿನ ಮೂಲಕ ತಮ್ಮನ್ನು ತಾವು ಹೊಗಳಿಸಿಕೊಳ್ಳುವುದು ಮತ್ತು ಅಭಿವೃದ್ಧಿಯಾಗಿದೆ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Live : ಪತ್ರಿಕಾಗೋಷ್ಠಿ

ಉಪಸ್ಥಿತಿ : ರಾಜ್ಯಾಧ್ಯಕ್ಷರಾದ ಶ್ರೀ @BYVijayendra, ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP

ಸ್ಥಳ : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ https://t.co/EMKS1IEp5q

— BJP Karnataka (@BJP4Karnataka) May 20, 2024

ರಾಜ್ಯದ ಕಾಂಗ್ರೆಸ್ ಸರಕಾರದ ಒಂದು ವರ್ಷದ ಸಾಧನೆ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು ಮಾತನಾಡುತ್ತಿದ್ದಾರೆ. ಮತ್ತೊಂದು ಕಡೆ ಬಿಜೆಪಿ (BJP) ಜೊತೆ ಜೊತೆಗೆ ಈ ನಾಡಿನ ಜನಸಾಮಾನ್ಯರೂ ಸಹ ರಾಜ್ಯ ಸರಕಾರ ಕಳೆದ ಒಂದು ವರ್ಷದಲ್ಲಿ ಏನು ಸಾಧನೆ ಮಾಡಿದೆ ಎಂದು ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು.

ಗ್ಯಾರಂಟಿಯೇ (Congress Guarantee) ಅಭಿವೃದ್ಧಿಯೇ ಎಂದು ಬಿಂಬಿಸಲಾಗುತ್ತಿದೆ. ಬರಗಾಲದ ವಿಚಾರದಲ್ಲಿ ಸರಕಾರದ ನಡವಳಿಕೆ ಅಕ್ಷಮ್ಯ ಅಪರಾಧ. ಕೇಂದ್ರ ಸರಕಾರದಿಂದ ಅನುದಾನ ಬಂದಿಲ್ಲ ಎಂದು ಹೋರಾಟ ಮಾಡಿದರು. ಆದರೆ, ಚುನಾಯಿತ ಸರಕಾರದ ಜವಾಬ್ದಾರಿ, ಮುಖ್ಯಮಂತ್ರಿಗಳ ಹೊಣೆಯನ್ನು ನಿಭಾಯಿಸುತ್ತಿದ್ದಾರೆ ಎಂದು ರೈತರಿಗೆ ಯಾವತ್ತೂ ಅನಿಸಿಲ್ಲ. ರಾಜ್ಯದಲ್ಲಿ 692ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರಕಾರವು ಕೃಷಿ ಸಾಲ, ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ನಿಟ್ಟಿನಲ್ಲಿ ಗಂಭೀರವಾದ ಅಥವಾ ಜವಾಬ್ದಾರಿಯುತ ಸರಕಾರವಾಗಿ ನಡೆದುಕೊಳ್ಳದೆ ಇರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

 

congress government cabinet

 

ರೈತರ ಬಗೆಗಿನ ಸರಕಾರದ ಅಸಡ್ಡೆಯ ಧೋರಣೆ ಗೋಚರಿಸಿದೆ. ಸರಕಾರವು ಜವಾಬ್ದಾರಿಯುತವಾಗಿ ನಡೆದುಕೊಂಡಿದೆಯೇ? ತನ್ನ ಹೊಣೆ ನಿಭಾಯಿಸಿದೆಯೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಹೈನುಗಾರಿಕೆ ಪ್ರೋತ್ಸಾಹಧನವನ್ನೂ 8-10 ತಿಂಗಳಿನಿಂದ ನೀಡಿಲ್ಲ. ಗ್ಯಾರಂಟಿಗಳ ಅನುಷ್ಠಾನದ ಆತುರದಲ್ಲಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ರಾಜ್ಯ ಸರಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ರಾಜ್ಯಾದ್ಯಂತ ನೂರು ಶಾಲೆಗಳನ್ನು ತೆರೆಯುತ್ತೇವೆ: ಮಧು ಬಂಗಾರಪ್ಪ

ಸಿಎಂ ಒಳಗೊಂಡಂತೆ ಸಚಿವರು ಕರ್ನಾಟಕ ಸರ್ಕಾರ ಕರ್ನಾಟಕದ ಅಭಿವೃದ್ಧಿ ದೇಶಕ್ಕೇ ಮಾದರಿ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಒಬ್ಬರು ಕಾಂಗ್ರೆಸ್ ನಾಯಕರು ಅಸಾಧ್ಯವಾದುದನ್ನು ನಾವು ಸಾಧಿಸಿ ತೋರಿಸಿದ್ದೇವೆ ಎನ್ನುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಈ ಸರಕಾರದ ವೈಫಲ್ಯಗಳನ್ನು ತೆರೆದಿಡುವುದು ನಮ್ಮ ಕರ್ತವ್ಯವೂ ಹೌದು ಎಂದು ನುಡಿದರು.

ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಮಾತನ್ನು ಕೇಳಿದರೆ, ಗ್ಯಾರಂಟಿಯೇ ಈ ರಾಜ್ಯದ ಅಭಿವೃದ್ಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಗ್ಯಾರಂಟಿಗೆ ಪ್ರಚಾರ ಕೊಟ್ಟು, ಅದರ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಈ ಸರ್ಕಾರದ ಹಣೆಬರಹ ಗೊತ್ತಾಗಲಿದೆ. ಮೋದಿಜಿ ಅವರ ಮೋದಿ ಗ್ಯಾರಂಟಿ ಬಗ್ಗೆ ಜನತೆ ಭರವಸೆ ಇಟ್ಟು ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸರ್ಕಾರ ಅಭಿವೃದ್ಧಿಯ ಕಡೆ ಗಮನ ಕೊಡಬೇಕು. ಕಾನೂನು- ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು.

 

TAGGED:congressKarnaratkapoliticssiddaramaiahVijayendraಕರ್ನಾಟಕಕಾಂಗ್ರೆಸ್ರಾಜಕೀಯವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
3 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
11 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
13 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
14 hours ago

You Might Also Like

k ashraf
Dakshina Kannada

ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

Public TV
By Public TV
53 seconds ago
Corona Virus
Belgaum

ಬೆಳಗಾವಿಯಲ್ಲಿ ಕೊರಾನಾಗೆ ಮೊದಲ ಬಲಿ

Public TV
By Public TV
14 minutes ago
Naveen Kumar
Crime

ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

Public TV
By Public TV
50 minutes ago
Omar Abdullah
Latest

ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

Public TV
By Public TV
56 minutes ago
virat kohli shreyas iyer 2
Cricket

ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

Public TV
By Public TV
1 hour ago
Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?