ಬೆಂಗಳೂರು: ಎಟಿಎಂ ಸರ್ಕಾರ (ATM Sarkara) ಬೆನ್ನಿಗೆ ನಿಂತ ಕಾರಣ ಪ್ರತಿಯೊಂದು ಪರೀಕ್ಷೆಯಲ್ಲೂ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಪ್ತ ಆರ್. ಡಿ. ಪಾಟೀಲ್ (RD Patel) ರಾಜಾರೋಷವಾಗಿ ಅಕ್ರಮ ನಡೆಸುತ್ತಿದ್ದಾನೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಅಕ್ರಮದ ಆರೋಪಿ ಆರ್. ಡಿ. ಪಾಟೀಲ್ ವಿಚಾರವನ್ನು ಪ್ರಸ್ತಾಪಿಸಿ ಬಿಜೆಪಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಕಾಂಗ್ರೆಸ್ ಸರ್ಕಾರ ಮತ್ತು ಪ್ರಿಯಾಂಕ್ ಖರ್ಗೆ ಅವರನ್ನು ಟೀಕಿಸಿದೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಸಿಎಂಗೆ ಮನವಿ: ಪರಮೇಶ್ವರ್
ಪೋಸ್ಟ್‌ನಲ್ಲಿ ಏನಿದೆ?
ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸುವುದಕ್ಕೆ ಕುಖ್ಯಾತಿ ಪಡೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಆರ್‌ಡಿ ಪಾಟೀಲ್ (RD Patel) ಕಾನ್‌ಸ್ಟೇಬಲ್ ಪರೀಕ್ಷೆಯಲ್ಲೂ ಅಕ್ರಮ ನಡೆಸಲು ಹೊಂಚು ಹಾಕಿ ಕೂತಿದ್ದು ಬೆಳಕಿಗೆ ಬಂದಿದೆ. ಮೊಬೈಲಿನಲ್ಲೇ ಲೇಟೆಸ್ಟ್ ಸುದ್ದಿ ಓದಲು ಪಬ್ಲಿಕ್ ಟಿವಿ ವಾಟ್ಸಪ್ ಚಾನೆಲಿಗೆ ಸೇರ್ಪಡೆಯಾಗಿ: ಪಬ್ಲಿಕ್ ಟಿವಿ ವಾಟ್ಸಪ್ ಚಾನೆಲ್
ATMSarkara ಬೆನ್ನಿಗೆ ನಿಂತಿರುವುದರಿಂದ ಪ್ರತಿಯೊಂದು ಪರೀಕ್ಷೆಯಲ್ಲೂ ಆರ್. ಡಿ. ಪಾಟೀಲ್ ರಾಜಾರೋಷವಾಗಿ ಅಕ್ರಮ ನಡೆಸುತ್ತಿದ್ದಾನೆ. ಸಿಬಿಐ (CBI) ತನಿಖೆಗೆ ವಹಿಸಿ ಎಂದರೆ ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಮೂಗು ಮುರಿಯುತ್ತಿದ್ದಾರೆ. ತಮ್ಮ ಬುಡಕ್ಕೆ ಪ್ರಕರಣ ಬಂದು ಬೀಳಲಿದೆ ಎನ್ನುವುದು ಅವರಿಗೆ ಖಾತರಿಯಾಗಿದೆ.
ಕಲೆಕ್ಷನ್ ಮಾಸ್ಟರ್ಸ್‌ಗಳ ಎಟಿಎಂ ಸರ್ಕಾರ ಐಎಎಸ್ ಅಧಿಕಾರಿಗಳನ್ನೇ ಲೂಟಿಗೆ ಇಳಿಸಿದೆ. ಎಫ್‌ಡಿಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಲು ಕೆಂಪು ಹಾಸಿಗೆ ಹಾಕಿ ಹಗಲು ದರೋಡೆ ಮಾಡುತ್ತಿರುವ ಕಲೆಕ್ಷನ್ ಮಂತ್ರಿ ಪ್ರಿಯಾಂಕ್ ಖರ್ಗೆ ಇದೀಗ ಕಿಯೋನಿಕ್ಸ್ ಸಂಸ್ಥೆಗೂ ಟಾರ್ಗೆಟ್ ಫಿಕ್ಸ್ ಮಾಡಿಸಿದ್ದಾರೆ. ಕಿಯೋನಿಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಬಾಕಿ ಬಿಲ್ ನೀಡುವುದಕ್ಕೆ ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಕೇಳಿದ್ದಾರೆ ಎಂದು ಖುದ್ದು ಕಿಯೋನಿಕ್ಸ್ ಗುತ್ತಿಗೆದಾರರ ಸಂಘ ಬಹಿರಂಗಪಡಿಸಿದೆ.
ಕಲೆಕ್ಷನ್ ಮಾಸ್ಟರ್ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಕೂಡಲೇ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಜತೆಗೆ ಕಲೆಕ್ಷನ್ ದಂಧೆಯ ಕುರಿತು ನ್ಯಾಯಾಂಗ ತನಿಖೆಗೆ ವಹಿಸಬೇಕು.