– ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಮಹಿಳೆಯರ ಆಕ್ರೋಶ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ (Congress Guarantee) ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ (Gruhalakshmi) ಯೋಜನೆ ಹಳ್ಳಹಿಡಿಯುತ್ತಿದ್ಯಾ ಎಂಬ ಅನುಮಾನ ಶುರುವಾಗಿದೆ.
ಬೆಂಗಳೂರು, ಹಾಸನ, ರಾಯಚೂರು, ಮಂಡ್ಯ, ಕೋಲಾರ ಜಿಲ್ಲೆಯಲ್ಲಿ ಕೆಲವು ಮಹಿಳೆಯರಿಗೆ (Women) ಮೊದಲ ತಿಂಗಳ ಹಣ ಮಾತ್ರ ಬಂದಿದ್ದರೆ, ಕೆಲವರಿಗೆ ಮೂರು ತಿಂಗಳ ಹಣ ಬಂದಿದೆ. ಆದರೆ ಕಡು ಬಡವರು, ಬೀದಿ ಬದಿ ವ್ಯಾಪಾರಿಗಳಿಗೆ ಒಂದು ತಿಂಗಳ ಹಣವೂ ಬಂದಿಲ್ಲ. ಇದನ್ನೂ ಓದಿ: ಕೃಷಿ ಉಪಕರಣಗಳ ಬೆಲೆ ದುಪ್ಪಟ್ಟು – ಅಂದು 30 ಪೈಪ್, 5 ಸ್ಪ್ರಿಂಕ್ಲರ್‌ಗೆ 1,876 ರೂ. – ಈಗ 4,667 ರೂ.ಗೆ ಏರಿಕೆ
ಅಧಿಕಾರಿಗಳನ್ನು ಪ್ರಶ್ನಿಸಿದರೆ ಆಧಾರ್ ಕಾರ್ಡ್ ನಂಬರ್, ಫೋನ್ ನಂಬರ್ ಸರಿಯಲ್ಲ ಎನ್ನುತ್ತಾರೆ. ಎಲ್ಲವನ್ನು ಸರಿಪಡಿಸಿದರೂ ಸಹ ಹಣ ಬಂದಿಲ್ಲ ಎಂದು ಸರ್ಕಾರದ ವಿರುದ್ದ ಮಹಿಳೆಯರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಎಣ್ಣೆ ಶಾಕ್ ಫಿಕ್ಸ್ – ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ
ಬ್ಯಾಂಕ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳಲ್ಲಿ ಗ್ಯಾರೆಂಟಿ ಯೋಜನೆ ಹಣದ ಬಗ್ಗೆ ವಿಚಾರಿಸಿ ನಿರಾಶರಾಗಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿದೆ.
ಅನ್ನಭಾಗ್ಯದ ಹಣವೂ ಇಲ್ಲ:
ಗ್ಯಾರಂಟಿಗಳನ್ನು ಈಡೇರಿಸುವ ಜಂಬದಲ್ಲಿರುವ ರಾಜ್ಯ ಸರ್ಕಾರ ಸಾಕಷ್ಟು ಜನ ಮಹಿಳೆಯರಿಗೆ ಗೃಹ ಲಕ್ಷ್ಮಿ ಇರಲಿ ಅನ್ನಭಾಗ್ಯ ಹಣವನ್ನೂ (Anna Bhagya Yojana) ಕೊಡುತ್ತಿಲ್ಲ
ಕೋಲಾರ ನಗರದ ನೂರ್ ನಗರದಲ್ಲಿ ಸಾಕಷ್ಟು ಜನ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ಹಣ ಮಾತ್ರವಲ್ಲ ಅನ್ನಭಾಗ್ಯ ಯೋಜನೆಯ ಹಣ ಕೂಡ ಸಿಕ್ಕಿಲ್ಲ. ಅಧಿಕಾರಿಗಳನ್ನು ಕೇಳಿದರೆ ಬರುತ್ತೆ ಹೋಗಿ ಎನ್ನುತ್ತಾರೆ. ಅಲ್ಲದೆ ಆಹಾರ ಇಲಾಖೆಯಲ್ಲಿ ಕೇಳಿದರೆ ಬ್ಯಾಂಕ್ ಆಧಾರ್ ಲಿಂಕ್ ಮಾಡಿ ಎನ್ನುತ್ತಾರೆ. ಬ್ಯಾಂಕ್‌ನಲ್ಲಿ ವಿಚಾರಿಸಿದರೆ ಆಹಾರ ಇಲಾಖೆಯಲ್ಲಿ ಕೇಳಿ ಎನ್ನುತ್ತಾರೆ. ಹಾಗಾಗಿ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಮಹಿಳೆಯರು ಸಿಟ್ಟು ಹೊರ ಹಾಕಿದ್ದಾರೆ.