ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಸೋಮವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ.
ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
Advertisement
Advertisement
ಜೂನ್ 3 ರಂದು ವಿಧಾನಸಭೆಯಿಂದ ವಿಧಾನಪರಿಷತ್ 7 ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪಕ್ಷ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ನಾಮಪತ್ರ ಸಲ್ಲಿಸಲು ಮೇ 24 ಅಂದರೆ ಇದೇ ಮಂಗಳವಾರ ಅಂತಿಮ ದಿನವಾಗಿದ್ದು, ಸೋಮವಾರದೊಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ. ಇದನ್ನೂ ಓದಿ: ರಾಜ್ಯಸಭೆ, ಪರಿಷತ್ ಚುನಾವಣೆ – ಬಿಜೆಪಿ ಟಿಕೆಟ್ ಶನಿವಾರ ಫೈನಲ್, ಸಿಎಂ ದೆಹಲಿಗೆ ದೌಡು
Advertisement
ಅದೇ ರೀತಿ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಗೆಲ್ಲಬಹುದಾದ ಒಂದು ಸ್ಥಾನಕ್ಕೂ ಅಭ್ಯರ್ಥಿಯ ಆಯ್ಕೆ ಮಾಡಬೇಕಿದೆ. ಜೂನ್ 10 ರಂದು ನಡೆಯುವ ಚುನಾವಣೆಗೆ ಮೇ 31 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ಸಿನ ಮಹತ್ವದ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
Advertisement
ಸಮಾಲೋಚನೆ ಬಳಿಕ ಕಾಂಗ್ರೆಸ್ ಹೈಕಮಾಂಡ್ ಸೋಮವಾರ ಕಣಕ್ಕಿಳಿಯುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.