ಬೆಂಗಳೂರು: ಬಿಜೆಪಿ (BJP) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪ ಖಂಡಿಸಿ ಜನವರಿ 23ರಂದು ಬೆಂಗಳೂರಿನ 300 ಕಡೆ ಪ್ರತಿಭಟನೆ (Protest) ನಡೆಸಲು ಕಾಂಗ್ರೆಸ್ (Congress) ನಿರ್ಧರಿಸಿದೆ.
ಈ ಸಂಬಂಧ ಶಾಸಕ ಎನ್.ಎ ಹ್ಯಾರಿಸ್ (Nalapad Ahmed Haris) ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ `ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಶೈಲಿಯಲ್ಲಿ ಮರ್ಡರ್ – ಫ್ಲೈಟ್ ಟಿಕೆಟ್ ಬುಕ್ ಮಾಡಿ ಸಿಕ್ಕಿಬಿದ್ದ ಆರೋಪಿ!
Advertisement
Advertisement
ಜ.23ರಂದು ನಗರದ ಟ್ರಿನಿಟಿ ಸರ್ಕಲ್ ನಲ್ಲಿ ಸಿದ್ದರಾಮಯ್ಯ (Siddaramaiah), ಡಿ.ಕೆ ಶಿವಕುಮಾರ್ (DK Shivakumar) ಹಾಗೂ ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರು ನಗರದ 300 ಕಡೆಗಳಲ್ಲಿ ಏಕಕಾಲಕ್ಕೆ ಪ್ರತಿಭಟನೆ ನಡೆಸಲು ‘ಕೈ’ ಪಾಳಯ ನಿರ್ಧರಿಸಿದೆ. ಬೆಂಗಳೂರಿನಲ್ಲಿ (Bengaluru) ಒಟ್ಟು 200 ಸಿಗ್ನಲ್, 26 ಫ್ಲೈಓವರ್, 25 ಮೆಟ್ರೋ ಸ್ಟೆಷನ್ ಗಳಲ್ಲಿ ಪ್ರತಿಭಟನೆ ಏಕಕಾಲಕ್ಕೆ ನಡೆಯಲಿದೆ.
Advertisement
Advertisement
ಈ ಕುರಿತು ಮಾತನಾಡಿದ ಶಾಸಕ ಎನ್.ಎ.ಹ್ಯಾರಿಸ್, ಭ್ರಷ್ಟಾಚಾರದ ಆರೋಪಗಳಿಗೆ ಬಿಜೆಪಿ ಈವರೆಗೆ ಉತ್ತರ ಕೊಡಲಾಗಿಲ್ಲ. ಹಾಗಾಗಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ನೀತಿ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದೆ ಇನ್ನಷ್ಟು ಹೋರಾಟ ಮಾಡ್ತೇವೆ. ಜೊತೆಗೆ `ಭ್ರಷ್ಟಾಚಾರ ನಿಲ್ಲಿಸಿ, ಬೆಂಗಳೂರು ಉಳಿಸಿ’ ಕಾರ್ಯಕ್ರಮ ಮಾಡ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ DNAಯಲ್ಲಿ ನಿವೃತ್ತಿ, ಪ್ರಾಮಾಣಿಕತೆ ಅನ್ನೋದೆ ಇಲ್ಲ: ಪ್ರಹ್ಲಾದ್ ಜೋಶಿ
40 ಪರ್ಸೆಂಟ್ ಕಮಿಷನ್‌ಗೆ ಕೊನೆಯೇ ಇಲ್ವಾ? ಅನ್ನೋ ತರಹ ಆಗಿದೆ. ಯಾವ ಸಚಿವರೂ ಇದಕ್ಕೆ ಉತ್ತರ ಕೊಡ್ತಾ ಇಲ್ಲ. ಆರೋಪಕ್ಕೆ ಕ್ರಮವನ್ನೂ ತೆಗೆದುಕೊಳ್ಳುತ್ತಿಲ್ಲ. ಸುಮ್ನೆ ವಿರೋಧ ಪಕ್ಷವಾಗಿ ಕೂರುವುದಕ್ಕೆ ನಾವೂ ತಯಾರಿಲ್ಲ. ಪ್ರಧಾನಿ ಮೋದಿ ಕೂಡ ಇದುವರೆಗೆ 40 ಪರ್ಸೆಂಟ್ ಕಮಿಷನ್‌ಗೆ ಉತ್ತರ ಕೊಟ್ಟಿಲ್ಲ. ಪ್ರಧಾನಿ ಕಚೇರಿಯಿಂದಲೂ ಉತ್ತರ ಸಿಗುತ್ತಿಲ್ಲ. ಪಿಎಸ್‌ಐ ಸ್ಕ್ಯಾಮ್ ಏನು ಮಾಡಿದ್ರು? ಹರಿಶ್ಚಂದ್ರನ ಮೊಮ್ಮಕ್ಕಳ ತರಹ ಮಾತಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಿಂದ ಕಳೆದ 7-8 ತಿಂಗಳಿಂದ ಯಾವುದೇ ಮಾಸಾಶನ ಬರ್ತಾ ಇಲ್ಲ. ಅಂತಹದ್ದನ್ನೂ ಕೂಡ ನಿಲ್ಲಿಸಿದ್ದಾರೆ ಅಂದ್ರೆ ಸರ್ಕಾರದ ಬಳಿ ದುಡ್ಡಿಲ್ವಾ? ಇದನ್ನೆಲ್ಲಾ ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k