Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವನು ನಮ್ಮ ಅಪ್ಪನ ಮೀಟ್ ಮಾಡಬೇಕು ಅಂತಿದಾನೆ, ನಾನೇ ಅವನನ್ನ ಎಲ್ಲಿ, ಹೇಗೆ, ಯಾವಾಗ ಮೀಟ್ ಮಾಡಬೇಕೋ ಮಾಡ್ತೀನಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅವನು ನಮ್ಮ ಅಪ್ಪನ ಮೀಟ್ ಮಾಡಬೇಕು ಅಂತಿದಾನೆ, ನಾನೇ ಅವನನ್ನ ಎಲ್ಲಿ, ಹೇಗೆ, ಯಾವಾಗ ಮೀಟ್ ಮಾಡಬೇಕೋ ಮಾಡ್ತೀನಿ!

Bengaluru City

ಅವನು ನಮ್ಮ ಅಪ್ಪನ ಮೀಟ್ ಮಾಡಬೇಕು ಅಂತಿದಾನೆ, ನಾನೇ ಅವನನ್ನ ಎಲ್ಲಿ, ಹೇಗೆ, ಯಾವಾಗ ಮೀಟ್ ಮಾಡಬೇಕೋ ಮಾಡ್ತೀನಿ!

Public TV
Last updated: February 17, 2022 9:35 pm
Public TV
Share
4 Min Read
DK SHIVAKUMAR 2
SHARE

ಬೆಂಗಳೂರು: ಹರಕು ಬಾಯಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಆತ ಮೊದಲು ಸಚಿವ ಸ್ಥಾನದಿಂದ ಕೆಳಗೆ ಇಳಿಯಬೇಕು. ನಮ್ಮಪ್ಪನ ಬಗ್ಗೆ ಅವರು ಮಾತನಾಡಿದ್ದಾರೆ. ಬೇಕಾದರೆ ನಮ್ಮಪ್ಪನನ್ನು ಭೇಟಿ ಮಾಡಲಿ. ಈ ವಿಚಾರವಾಗಿ ಸಮಯ ಬಂದಾಗ ಅವರಿಗೆ ಉತ್ತರ ನೀಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

KS Eshwarappa dk shivakumar

ವಿಧಾನಸೌಧಸಲ್ಲಿ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆತ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಬದಲಿಗೆ ಕೇಸರಿ ಧ್ವಜ ಹಾರಿಸಲು ಬಯಸಿದ್ದು, ಇದು ದೇಶದ ಕಾನೂನಿಗೆ ವಿರುದ್ಧವಾಗಿದೆ. ಅವರು ಸಂವಿಧಾನ ಬದಲಿಸಲು, ರಾಷ್ಟ್ರಧ್ವಜ ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದೇ ನಮ್ಮ ಆಗ್ರಹ. ಹೀಗಾಗಿ ನಾವು ಅಹೋರಾತ್ರಿ ವಿಧಾನಸಭೆಯಲ್ಲಿ ಧರಣಿ ಮಾಡುತ್ತೇವೆ ಎಂದರು. ಇದನ್ನೂ ಓದಿ: ಐಎಂಎ ಹಗರಣದಲ್ಲಿ ಸರ್ಕಾರದಿಂದ ಯಾರ ರಕ್ಷಣೆಯೂ ಇಲ್ಲ: ಬೊಮ್ಮಾಯಿ

ESHWARAPPA 1

ರೈತರು ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಕೆಳಭಾಗದಲ್ಲಿ ರೈತರ ಧ್ವಜ ಹಾರಿಸಲು ಮುಂದಾದಾಗ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಿಲ್ಲವೇ? ಅದೇ ರೀತಿ ಈಶ್ವರಪ್ಪ ವಿರುದ್ಧವೂ ದೇಶದ್ರೋಹ ಪ್ರಕರಣ ದಾಖಲಿಸಬೇಕು. ನಾವು ಕೇಸರಿ ಧ್ವಜ ಹಾರಿಸುತ್ತೇವೆ, ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಅವರೇ ಹೇಳಿದ್ದಾರೆ. ಅವರ ಹೇಳಿಕೆಯನ್ನು ಇಡೀ ಬಿಜೆಪಿ ಪಕ್ಷ ಸಮರ್ಥಿಸಿಕೊಳ್ಳುತ್ತಿದೆ. ಹೀಗಾಗಿ ಈ ಪ್ರಕರಣದಲ್ಲಿ ಕೇವಲ ಈಶ್ವರಪ್ಪ ಮಾತ್ರ ಆರೋಪಿಯಲ್ಲ. ಇಡೀ ಬಿಜೆಪಿ ಪಕ್ಷವೇ ಇದರಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದರು.

DK SHIVAKUMAR

ಈಶ್ವರಪ್ಪನ ಹರಕುಬಾಯಿಯಿಂದ ಬಿಜೆಪಿ ಪಕ್ಷಕ್ಕೆ, ರಾಜ್ಯಕ್ಕೆ ಹಾಗೂ ದೇಶದ ಘನತೆಗೆ ಧಕ್ಕೆಯಾಗುತ್ತಿದ್ದು, ಆತನ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳಲಿದೆ ಎಂದು ಭಾವಿಸಿದ್ದೆ. ಆದರೆ, ಬಿಜೆಪಿ ನಾಯಕರು ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ರಾಜೀನಾಮೆ ಪಡೆಯುತ್ತಿಲ್ಲ, ರಾಜ್ಯಪಾಲರು ವಜಾ ಮಾಡುತ್ತಿಲ್ಲ, ಇನ್ನು ಅಧಿಕಾರಿಗಳು ಬಿಜೆಪಿ ಜತೆ ಶಾಮೀಲಾಗಿದ್ದಾರೆ. ಪೊಲೀಸ್ ಮಹಾನಿರ್ದೇಶಕರು ಇದುವರೆಗೂ ಯಾಕೆ ಪ್ರಕರಣ ದಾಖಲಿಸಿಲ್ಲ? ಅವರ ಹೊಣೆಗಾರಿಕೆ ಕೂಡ ಇದರಲ್ಲಿ ಇದೆ ಎಂದರು. ಇದನ್ನೂ ಓದಿ: ಹೆಗ್ಗಣಗಳನ್ನು ಸ್ಪೀಕರ್ ಕಳ್ಸಿದ್ದಾರೆ ಅಂತಾ ಹೇಳ್ಬೇಡಿ: ಸಿದ್ದರಾಮಯ್ಯ ಕಾಲೆಳೆದ ಸ್ಪೀಕರ್!

KS Eshwarappa

ನಾನ್ಯಾರಿಗೂ ನೀನು ಎಂದಿಲ್ಲ!: ನಾನು ಶಾಸನಸಭೆಯಲ್ಲಿ ಯಾರಿಗೂ ನೀನು ಎಂದಿಲ್ಲ. ಆದರೆ ಅವರು ನಮ್ಮ ತಂದೆ ಬಗ್ಗೆ ಮಾತನಾಡಿದ್ದಾರೆ. ನಮ್ಮ ಪೂರ್ವಿಕರು ಗಾಂಧಿ ತತ್ವ ಅನುಸರಿಸುತ್ತಿದ್ದರು. ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ಹೋರಾಟದ ಇತಿಹಾಸವಿದೆ. ಈ ದೇಶಕ್ಕೆ ಸ್ವಾತಂತ್ರ್ಯ, ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆ ಎಲ್ಲವನ್ನು ಕೊಟ್ಟಿರುವವರು ನಾವು. ಮಹಾತ್ಮಾ ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತಾ ಈ ದೇಶವನ್ನು ಅಭಿವೃದ್ಧಿಶೀಲ ಮಾಡಲು ಅಡಿಪಾಯ ಹಾಕಿದ್ದೇವೆ. ರಾಷ್ಟ್ರಧ್ವಜ ರಕ್ಷಣೆ ಹೇಗೆ ಮಾಡಬೇಕು ಎಂದು ಸಂವಿಧಾನದಲ್ಲಿ ಹೇಳಲಾಗಿದೆ. ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.

DK SHIVAKUMAR 2

ಈ ಬಂಡೆಗೆ ಡೈನಮೇಟ್ ಇಟ್ಟಿದ್ದಾರೆ. ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಬಂಡೆ ಚಪ್ಪಡಿ ಕಲ್ಲಾಗಬಹುದು, ಜಲ್ಲಿ ಆಗಬಹುದು, ವಿಗ್ರಹ ಆಗಬಹುದು. ಬಂಡೆಯಿಂದ ಆದ ವಿಗ್ರಹವನ್ನೇ ಎಲ್ಲರೂ ಪೂಜಿಸುತ್ತಿದ್ದಾರೆ. ಹೀಗಾಗಿ ನನ್ನನ್ನು ಬಂಡೆ ಎಂದು ಕರೆದರೆ ಬಹಳ ಸಂತೋಷ. ನನ್ನನ್ನು ಮತ್ತೆ ಜೈಲಿಗೆ ಹಾಕಿಸಲು ಅಧಿಕಾರಿಗಳಿಗೆ ಏನೆಲ್ಲಾ ಸೂಚನೆ ಕೊಡುತ್ತಿದ್ದಾರೆ. ನನ್ನ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ. ಬಿಜೆಪಿಯವರ ಜತೆ ಬೇರೆ ಪಕ್ಷದವರೂ ಸೇರಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರಹಾಕಿ: ಹೆಚ್‍ಡಿಕೆ

DK SHIVAKUMAR 1

ಕಾಂಗ್ರೆಸ್ ಪಕ್ಷ ಪ್ರತಿಭಟನೆಗೆ ತ್ರಿವರ್ಣ ಧ್ವಜ ಬಳಸಿ ಅಪಮಾನ ಮಾಡಿದೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ಬಿಜೆಪಿ ಅವರು ತಿರಂಗಾ ಯಾತ್ರೆ ಮಾಡಿಲ್ಲವೇ? ಕಲ್ಯಾಣ್ ಸಿಂಗ್ ಅವರು ಸತ್ತಾಗ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜ ಹಾಕಲಿಲ್ಲವೇ? ಯೋಗಿ ಆದಿತ್ಯನಾಥ್ ರಾಷ್ಟ್ರಧ್ವಜದ ಮೇಲೆ ಕೇಸರಿ ಧ್ವಜ ಹಾರಿಸಿದರಲ್ಲಾ ಇವೆಲ್ಲಾ ಏನು? ನಾವು ರಾಷ್ಟ್ರಧ್ವಜಕ್ಕೆ ಗೌರವ ಕೊಟ್ಟು ಹೋರಾಟದ ಭಾಗವಾಗಿ ಬಳಸಿದ್ದೇವೆ. ಈ ಹಿಂದಿನ ಬಹುತೇಕ ಎಲ್ಲ ಹೋರಾಟದ ಸಮಯದಲ್ಲೂ ತ್ರಿವರ್ಣ ಧ್ವಜ ಬಳಸಲಾಗಿದೆ. ಅದು ನಮ್ಮ ಹೆಮ್ಮೆ. ನಮ್ಮ ರಾಷ್ಟ್ರಧ್ವಜ ರಕ್ಷಣೆ ಮಾಡಿ ಎಂದು ನಾವು ಕೇಳುತ್ತಿದ್ದೇವೆ ಎಂದು ಉತ್ತರಿಸಿದರು.

ಹಿಜಾಬ್ ವಿಚಾರದಲ್ಲಿ ಹಿನ್ನಡೆಯಾಗಿದೆ. ಹೀಗಾಗಿ ರಾಷ್ಟ್ರಧ್ವಜ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ, ಬಿಜೆಪಿ ಅವರು ಎಲ್ಲಾ ಚುನಾವಣೆಗಳಲ್ಲಿ ಸೋಲುತ್ತಿದ್ದಾರೆ. ನಾರಾಯಣ ಗುರುಗಳ ವಿಚಾರದಲ್ಲಿ ಹಿನ್ನಡೆ ಆಗಿದೆ. ಈ ಎಲ್ಲ ಕಾರಣಕ್ಕೆ ಅವರು ಭಾವನಾತ್ಮಕ ವಿಚಾರ ಎಳೆದು ತರುತ್ತಿದ್ದಾರೆ ಎಂದರು.

ಹಿಜಾಬ್ ವಿವಾದದ ಬಗ್ಗೆ ಕೇಳಿದ ಪ್ರಶ್ನೆಗೆ, ಆ ವಿಚಾರ ನ್ಯಾಯಾಲಯದಲ್ಲಿದೆ. ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅದರ ಆಧಾರದ ಮೇಲೆ ನ್ಯಾಯಾಲಯ ನಿರ್ದೇಶನ ನೀಡಿದೆ. ಅವರವರ ಸಂಸ್ಕೃತಿ, ಧರ್ಮ, ಪೋಷಕರ ವಿಚಾರ ಅವರು ನೋಡಿಕೊಳ್ಳುತ್ತಾರೆ. ನಾವು ರಾಜಕೀಯ ಪಕ್ಷವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಬಗ್ಗೆ ಪ್ರಶ್ನಿಸುತ್ತೇವೆ. ಇಷ್ಟು ದಿನ ಯಾರಾದರೂ ಕೇಸರಿ ಧ್ವಜ ಹಾಕುತ್ತಿದ್ದರಾ? ನಾವು ಧಾರ್ಮಿಕ ಚಟುವಟಿಕೆ ಸಮಯದಲ್ಲಿ ಹಾಕುತ್ತೇವೆ. ಹಾಗಂತ ಶಾಲೆಗೆ ಹಾಕಿಕೊಂಡು ಹೋಗಿದ್ದೇವಾ? ಅವರಲ್ಲಿ ಕೆಲವರು ಮೊದಲಿಂದಲೂ ಹಿಜಾಬ್ ಹಾಕಿಕೊಂಡೇ ಬರುತ್ತಿದ್ದಾರೆ. ನಮ್ಮ ಉತ್ತರ ಕರ್ನಾಟಕದ ಮಹಿಳೆಯರು ತಲೆ ಮೇಲೆ ಸೆರಗು ಹಾಕಿಕೊಳ್ಳುತ್ತಾರೆ. ರಾಷ್ಟ್ರಪತಿಯಾಗಿದ್ದ ಪ್ರತಿಭಾ ಪಾಟೀಲ್ ಕೂಡ ಹಾಗೆ ಹಾಕಿಕೊಳ್ಳುತ್ತಿದ್ದರು. ಅದೇ ರೀತಿ ಆ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಂಡಿದ್ದಾರೆ ಎಂದು ಉತ್ತರಿಸಿದರು.

Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Siddaramaiah
Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
By Public TV
2 minutes ago
Narendra Modi Emmanuel Macron
Latest

ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ

Public TV
By Public TV
39 minutes ago
If Chanakya were alive today even he would be stunned by your political cunning Priyanka Gandhi to Amit Shah over womens quota
Latest

ʻಚಾಣಕ್ಯʼನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

Public TV
By Public TV
47 minutes ago
Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
2 hours ago
Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
2 hours ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?