ಬೆಂಗಳೂರು: ನಿಗಮ-ಮಂಡಳಿ ಪಟ್ಟಿ ಫೈನಲ್ ಮಾಡುವ ಸಂಬಂಧ ಮಂಗಳವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Surjewala) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಮಧ್ಯಾಹ್ನ 12:20 ಕ್ಕೆ ಬೆಂಗಳೂರಿಗೆ (Bengaluru) ಆಗಮಿಸಲಿದ್ದು,ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜೊತೆ ನಿಗಮ-ಮಂಡಳಿ ಕುರಿತು ಸಭೆ ನಡೆಸಲಿದ್ದಾರೆ. ಬಹುತೇಕ ನಾಳೆಯೇ ನಿಗಮ-ಮಂಡಳಿ ಪಟ್ಟಿ ಫೈನಲ್ ಆಗುವ ಸಾಧ್ಯತೆ ಇದೆ.
Advertisement
Advertisement
ಈಗಾಗಲೇ ಮೊದಲ ಹಂತದ ಸಭೆಯನ್ನು ಸಿಎಂ, ಡಿಸಿಎಂ, ಸುರ್ಜೇವಾಲಾ ನಡೆಸಿದ್ದಾರೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದು, ಶಾಸಕರಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾಸಕರ ಜೊತೆ ಕಾರ್ಯಕರ್ತರಿಗೂ ನೀಡುವ ಬಗ್ಗೆ ಚರ್ಚೆ ಆಗಲಿದೆ. ಇದನ್ನೂ ಓದಿ: IPL 2024 Retention: 10 ತಂಡಗಳಲ್ಲಿ 173 ಜನ ಸೇಫ್ – 50 ಆಟಗಾರರಿಗೆ ಗೇಟ್‌ಪಾಸ್ – ಇಲ್ಲಿದೆ ಡಿಟೇಲ್ಸ್
Advertisement
ಶಾಸಕರಿಗೆ ಮಾತ್ರ ಮೊದಲ ಪಟ್ಟಿಯಲ್ಲಿ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರೆ ಕಾರ್ಯಕರ್ತರಿಗೂ ಮೊದಲ ಪಟ್ಟಿಯಲ್ಲಿ ಸ್ಥಾನ ಕೊಡಲು ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ನಾಳೆ ಮಹತ್ವದ ಸಭೆ ನಡೆಯಲಿದ್ದು,ಯಾರು ಯಾರಿಗೆ ನಿಗಮ-ಮಂಡಳಿ ಎನ್ನುವುದು ಬಹುತೇಕ ಫೈನಲ್ ಆಗುವ ಸಾಧ್ಯತೆಯಿದೆ.
Advertisement