ಬೆಂಗಳೂರು: ಅತೃಪ್ತ ಶಾಸಕರ ಅನರ್ಹಗೊಳಿಸಿದ ಸ್ಪೀಕರ್ ತೀರ್ಪನ್ನು ಸ್ವಾಗತಿಸುತ್ತೇವೆ. ಪಕ್ಷಕ್ಕೆ ಹಾಗೂ ಮತದಾರರಿಗೆ ದ್ರೋಹ ಮಾಡಿದಕ್ಕೆ ನ್ಯಾಯಾಲಯ ಕೂಡ ಶಾಸಕರಿಗೆ ತಕ್ಕ ಶಿಕ್ಷೆ ನೀಡಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಸೋಮವಾರ ನೂತನ ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವ ಮುನ್ನ ದಿನವೇ 14 ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅತೃಪ್ತ ಶಾಸಕರ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಸ್ಪೀಕರ್ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದಿದೆ.
ಅತೃಪ್ತ ಶಾಸಕರ ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರು ಕೊಟ್ಟಿರುವ ತೀರ್ಪನ್ನು ಸ್ವಾಗತಿಸುತ್ತೇವೆ.
ಮೈತ್ರಿ ಸರ್ಕಾರವನ್ನು ಉರುಳಿಸಬೇಕೆಂದೇ ಬಿಜೆಪಿಯೊಂದಿಗೆ ಕೈ ಜೋಡಿಸಿ ತಮ್ಮ ಪಕ್ಷಗಳಿಗೆ, ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ದ್ರೋಹ ಬಗೆದ ಈ ಶಾಸಕರುಗಳಿಗೆ ಜನತಾ ನ್ಯಾಯಾಲಯ ಕೂಡ ತಕ್ಕ ಶಿಕ್ಷೆಯನ್ನು ವಿಧಿಸಲಿದೆ. #KarnatakaPolitics
— Karnataka Congress (@INCKarnataka) July 28, 2019
ಟ್ವೀಟ್‍ನಲ್ಲಿ ಏನಿದೆ?
ಅತೃಪ್ತ ಶಾಸಕರ ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರು ಕೊಟ್ಟಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ಮೈತ್ರಿ ಸರ್ಕಾರವನ್ನು ಉರುಳಿಸಬೇಕೆಂದೇ ಬಿಜೆಪಿಯೊಂದಿಗೆ ಕೈ ಜೋಡಿಸಿ ತಮ್ಮ ಪಕ್ಷಗಳಿಗೆ, ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ದ್ರೋಹ ಬಗೆದ ಈ ಶಾಸಕರುಗಳಿಗೆ ಜನತಾ ನ್ಯಾಯಾಲಯ ಕೂಡ ತಕ್ಕ ಶಿಕ್ಷೆಯನ್ನು ವಿಧಿಸಲಿದೆ ಎಂದು ಬರೆದು ಟ್ವೀಟ್ ಮಾಡಲಾಗಿದೆ.
ಇಂದು ಸ್ಪೀಕರ್ ರಮೇಶ್ ಕುಮಾರ್ ಅವರು, ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಎಲ್ಲ ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದಾರೆ.
ಹಾಗೆಯೇ ಈ ಹಿಂದೆ ಅನರ್ಹಗೊಂಡ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್. ಶಂಕರ್ ಬೈ ಎಲೆಕ್ಷನ್ ಗೆ ನಿಲ್ಲುವಂತಿಲ್ಲ ಎಂದು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಖಡಕ್ಕಾಗಿ ತಿಳಿಸಿದ್ದಾರೆ.