ಬೆಂಗಳೂರು: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Devegowda) ಭವಿಷ್ಯ ನುಡಿದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೆ ಇವರು ಹೇಳ್ತಾರೆ. ಇವತ್ತು ಹೇಳ್ತೀನಿ ಕರ್ನಾಟಕದಲ್ಲಿ ಇವರು ಅಂತ್ಯ ಕಾಣ್ತಾರೆ. ನಾವು ಸೋಲಿಸಿಯೇ ಸೋಲಿಸ್ತೀವಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತೆ ಎಂದರು. ಇದನ್ನೂ ಓದಿ: ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ: ಹೆಚ್‌ಡಿಕೆ ವಾಗ್ದಾಳಿ
Advertisement
Advertisement
ಅಲ್ಲಿ ಮೋದಿ ಅವರು ಶ್ರೀರಾಮ ಅಂತಾರೆ. ಉಪವಾಸ, ನದಿ ಸ್ನಾನ ಇವೆಲ್ಲ ಮಾಡ್ತಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ NDA ಸೋಲಿಸಿ 20 ಸೀಟು ಗೆಲ್ತೀವಿ ಅನ್ನೋ ಹಿನ್ನೆಲೆಯಲ್ಲಿ ಇವೆಲ್ಲ ಸೃಷ್ಟಿ ಮಾಡ್ತಿದ್ದಾರೆ. 20 ಸೀಟು ಗೆಲ್ಲೋದು ಕನಸು ಮಾಡ್ತಿದ್ದಾರೆ. ಅದೆಲ್ಲ ಕನಸು ಮಾತ್ರ. ಈ ಬಾರಿ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎಲ್ಲರ ನಿರೀಕ್ಷೆ ಮೀರಿ ಜನ ಮೈತ್ರಿಗೆ ತೀರ್ಪು ಕೊಡ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
Advertisement
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಆಗಿರೋ ಬಗ್ಗೆ ಯಾವುದೇ ಸಂಶಯ ಬೇಡ. ಬಿಜೆಪಿ ಸರ್ಕಾರದ ಮೇಲೆ ಸಿದ್ದರಾಮಯ್ಯ ಅವರು ಎರಡು ಬಾರಿ ಸಿಎಂ ಆದ ಮೇಲೆ ಬಿಬಿಎಂಪಿ ಅಕ್ರಮದ ಬಗ್ಗೆ ತನಿಖೆ ಮಾಡ್ತೀವಿ ಅಂತಾ ಸಾವಿರ ಸಾರಿ ಹೇಳಿದ್ರು. ಆಗ ನಾವು ಅವರಿಗೆ ಬೆಂಬಲ ಕೊಟ್ಟಿದ್ವಿ. 40 ರಿಂದ 50% ಹೇಳಿ ಹೇಳಿ ಹೋದ್ರು. ಈಗ ಶ್ರೀಕಾಂತ್ ಪೂಜಾರಿ ಮೇಲೆ ಹಿಂದಿನ ಕೇಸ್ ರೀ ಓಪನ್ ಮಾಡಿ ಅದರ ಮೇಲೆ ಸೇಡು ತೆಗೆದುಕೊಂಡಿದ್ದಾರೆ. ಇದು ಸೇಡಿನ ರಾಜಕೀಯ ಮಾಡಿದ್ದಾರೆ. NDA ಜೊತೆ ಇರುವ ನಾವು ಈ ಸಮಯದಲ್ಲಿ ನಮ್ಮ ಅಭಿಪ್ರಾಯ ಹೇಳೋ ಸ್ವಾತಂತ್ರ್ಯ ಇದೆ. ಸೇಡಿನ ರಾಜಕೀಯ ಮೂಲಕ ಇವರು ತಿಳಿಯುತ್ತಿದ್ದಾರೆ. ಅ ಸಮಯದಲ್ಲಿ ನಾವು ಮಾತಾಡೋ ಅವಶ್ಯಕತೆ ಇರುತ್ತೆ ಎಂದು ಹೇಳಿದರು. ಇದನ್ನೂ ಓದಿ: ಜೈಲು ಸೇರಿರುವ ಸಂಜಯ್ ಸಿಂಗ್‍ಗೆ ಎಂಪಿಯಾಗಿ ಮುಂದುವರಿಸಲು ಆಪ್ ನಿರ್ಧಾರ
Advertisement
ಈ ಸರ್ಕಾರ ಪಂಚರಾಜ್ಯ ಚುನಾವಣೆಯಲ್ಲಿ ಎಷ್ಟು ಹಣವನ್ನು ಎಲ್ಲಿಗೆ ತೆಗೆದುಕೊಂಡು ಹೋಗಿದೆ. ಇದು ಕರ್ನಾಟಕ ಜನರ ಸಂಪತ್ತು. ಡಿಸಿಎಂ ಅವರ ಉದ್ಧಟತನ. ಅವರು ಎಲ್ಲೆಲ್ಲಿ ಹೋಗಿದ್ದಾರೆ, ಎಷ್ಟು ಹಣ ಸಾಗಿಸಿದ್ದಾರೆ, ಚುನಾವಣೆ ಆಯೋಗ ಎಷ್ಟು ಹಣ ಸೀಜ್ ಮಾಡಿದೆ, ಈ ಹಣ ಹೋಗಿರೋದು ಬೆಂಗಳೂರಿನಿಂದ ಎಂದು ಆರೋಪಿಸಿದರು.
ನೈಸ್ ರೋಡ್ ಪ್ರಾಜೆಕ್ಟ್ ವಿಷಯ ಎಲ್ಲರಿಗೂ ಗೊತ್ತಿದೆ. ಬಡವರಿಗೆ ಇದರಿಂದ ಅನ್ಯಾಯ ಆಗಿದೆ. ನಮ್ಮ ಪಕ್ಷ ಇದರ ವಿರುದ್ಧ ಧ್ವನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ವಿಧಾನಸಭೆಯಲ್ಲಿ ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು. ಸದನ ಸಮಿತಿ ವರದಿ ಕೊಟ್ಟಿದೆ. ಎಷ್ಟು ಅಕ್ರಮ ಆಗಿದೆ. ಈ ಪ್ರಾಜೆಕ್ಟ್ ಸರ್ಕಾರ ವಶಪಡಿಸಿಕೊಳ್ಳಬೇಕು ಅಂತಾ ವರದಿ ಕೊಟ್ಟಿದೆ. ಆದರೆ ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ. ಅಕ್ಟೋಬರ್ 19 ರಲ್ಲಿ ಸಿಎಂ ಅವರಿಗೆ ಪತ್ರ ಬರೆದಿದ್ದೆ. ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹ ಮಾಡಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ನಾಯಕರ ‘ನನ್ನನ್ನೂ ಬಂಧಿಸಿ’ ಪೋಸ್ಟರ್ ಅಭಿಯಾನಕ್ಕೆ ಕಾಂಗ್ರೆಸ್ ಠಕ್ಕರ್
13,404 ಎಕರೆ ಭೂಮಿ ನೈಸ್ ವಶಪಡಿಸಿಕೊಂಡಿದೆ. ಅದನ್ನ ಸರ್ಕಾರ ವಶಪಡಿಸಿಕೊಳ್ಳಬೇಕು ಅಂತ ಸಿಎಂಗೆ ಪತ್ರ ಬರೆದಿದ್ದೆ. 13 ಸಾವಿರ ಎಕರೆ ಬೆಲೆ 7 ಸಾವಿರ ಕೋಟಿ ಅಂತಾ ಸದನ ಸಮಿತಿ ವರದಿ ಕೊಟ್ಟಿದೆ. ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಇವತ್ತು ಇದರ ಬೆಲೆ ಇನ್ನು ಜಾಸ್ತಿ ಆಗುತ್ತದೆ. ಸಿದ್ದರಾಮಯ್ಯಗೆ ಏನ್ ಕಷ್ಟ ಇದೆಯೋ ಗೊತ್ತಿಲ್ಲ. ಸಿದ್ದರಾಮಯ್ಯ ಬಡವರ ಪರ ಮಾತಾಡ್ತಾರೆ. ಇಷ್ಟೊಂದು ಅಕ್ರಮ ಆಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡೋ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ? ಸಿದ್ದರಾಮಯ್ಯ ಎಷ್ಟು ವರ್ಷ ಆಳಿದರೂ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳದೇ ಹೋದ್ರೆ ಕಪ್ಪುಚುಕ್ಕೆಯಿಂದ ಹೊರ ಬರೊಲ್ಲ. ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.