Connect with us

ಜನ ಸಹಕಾರ ನೀಡದೇ ಹೋದರೆ ರಾಜ್ಯದಲ್ಲಿ ಲಾಕ್‍ಡೌನ್ ಅನಿವಾರ್ಯ: ಡಾ.ಸುಧಾಕರ್

ಜನ ಸಹಕಾರ ನೀಡದೇ ಹೋದರೆ ರಾಜ್ಯದಲ್ಲಿ ಲಾಕ್‍ಡೌನ್ ಅನಿವಾರ್ಯ: ಡಾ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಜನತೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡದೇ ಹೋದರೆ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಅನಿವಾರ್ಯ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್ ಅವರು, ಕೊರೊನಾ ನಿಯಂತ್ರಣಕ್ಕೆ ನಾವು ಒಂದೊಂದೇ ಹೆಜ್ಜೆಯನ್ನು ಇಡಬೇಕಾಗುತ್ತದೆ. ಜನ ಜಾಗೃತರಾಗಿದ್ದರೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಅವಶ್ಯಕತೆ ಬರುವುದಿಲ್ಲ. ಯಾವುದೇ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧ ಮಾಡುವ ಅಗತ್ಯ ಬರುವುದಿಲ್ಲ. ಹಾಗಾಗಿ ಸಾರ್ವಜನಿಕರಿಗೆ ಕೊರೊನಾ ನಿಯಂತ್ರಣದ ಮೇಲೆ ಜವಾಬ್ದಾರಿ ಇದೆ. ಸಾರ್ವಜನಿಕರು ಮತ್ತು ಸರ್ಕಾರದ ಸಹಭಾಗಿತ್ವದಲ್ಲಿ ನಾವು ಕೊರೊನಾ ನಿಯಂತ್ರಣ ಮಾಡಬೇಕಾಗಿದೆ ಎಂದರು.

ಸಾರ್ವಜನಿಕರು ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳನ್ನು ಸರಿಯಾಗಿ ಪಾಲನೆ ಮಾಡದೇ ಇದ್ದಂತಹ ದೇಶ ಮತ್ತು ರಾಜ್ಯಗಳಲ್ಲಿ ಮತ್ತೆ ಲಾಕ್‍ಡೌನ್ ಪರಿಸ್ಥಿತಿ ಬಂದಿದೆ. ಈ ಪರಿಸ್ಥಿತಿ ರಾಜ್ಯದಲ್ಲಿ ಬರದೆ ಇರಬೇಕೆಂದರೆ ಸಾರ್ವಜನಿಕರು ಈಗಲೇ ಎಚ್ಚೆತ್ತುಕೊಳ್ಳಿ ಎಂದು ವಾರ್ನಿಂಗ್ ಕೊಟ್ಟರು.

ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡಲಾಗಿದೆ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಬರದಿರಬೇಕೆಂದರೆ, ಸಾರ್ವಜನಿಕರು ಎಲ್ಲರೂ ಕೂಡ ಸರ್ಕಾರ ಸೂಚಿಸುವ ಮಾರ್ಗಸೂಚಿಗಳನ್ನು ಪಾಲನೆ ಮಾಡಿ ನಿಮ್ಮನ್ನು ರಕ್ಷಣೆ ಮಾಡಿಕೊಳ್ಳಿ. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ನಿಮ್ಮ ಬದುಕನ್ನು ರೂಪಿಸಿಕೊಳ್ಳುವಂತಹ ಆರ್ಥಿಕ ಚಟುವಟಿಕೆಗಳು ಮುಂದುವರಿಯ ಬೇಕಾದರೆ ರಾಜ್ಯದ ಜನತೆ ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿಕೊಂಡರು.

Advertisement
Advertisement
Advertisement