ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಳೆಯಿಂದ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಅನುಮತಿ ಸಿಗಲಿದೆ.
ಕ್ರಷರ್ ವ್ಯವಹಾರ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಸಬ್‍ರಿಜಿಸ್ಟ್ರಾರ್ ಚೇರಿಗೆ ಬರುವ ಮುನ್ನ ಕಚೇರಿಗೆ ಕರೆ ಮಾಡಿ ಅಧಿಕಾರಿಗಳಿಗೆ ಸಮಯ ಕೇಳಿ ಬರಬೇಕಾಗುತ್ತದೆ.
Advertisement
#Covid19 ಸೋಂಕು ಸಕ್ರಿಯವಾಗಿರುವ ಅನ್ವಯದಲ್ಲಿ ಕೆಂಪು ಹಳದಿ ಹಾಗೂ ಹಸಿರು ವಲಯಗಳಾಗಿ ವಿಂಗಡಿಸಲಾದ ಕರ್ನಾಟಕ ಜಿಲ್ಲಾ ಹಾಗೂ ತಾಲ್ಲೂಕುಗಳ ನಕ್ಷೆ. ಇದನ್ನು ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಸಿದ್ಧಪಡಿಸಿದೆ. #IndiaFightsCorona pic.twitter.com/Sb8DtWB7yQ
— B Sriramulu (@sriramulubjp) April 27, 2020
Advertisement
ಕಚೇರಿಗೆ ಬರುವವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಕಂದಾಯ ಸಚಿವ ಅಶೋಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಲಾಕ್‍ಡೌನ್ ನಿರ್ಧಾರ ರಾಜ್ಯಗಳಿಗೆ ಬಿಟ್ಟರೆ ಬಿಎಸ್‍ವೈ ಪ್ಲಾನ್ ಏನು?
Advertisement
ಈಗಾಗಲೇ ಅಗತ್ಯ ಸೇವೆ ಜೊತೆ ಆರ್ಥಿಕ ಚಟುವಟಿಕೆಗಾಗಿ ಕೆಲ ನಿಯಮಗಳನ್ನು ಸಡಿಲ ಮಾಡಲಾಗಿದೆ. ಹೀಗಾಗಿ ಕೆಲ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರದಿಂದ ಅಧಿಕೃತ ಆದೇಶ ಇನ್ನೂ ಪ್ರಕಟವಾಗಿಲ್ಲ. ಇಂದು ಈ ಬಗ್ಗೆ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ.